ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ನಾರಾ ಭರತ್‌ರೆಡ್ಡಿ ಭರವಸೆ
Airport work in Bellary to begin soon: Nara Bharat Reddy promises
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ನಾರಾ ಭರತ್‌ರೆಡ್ಡಿ ಭರವಸೆ
ಬಳ್ಳಾರಿ 29: ಅಂದಾಜು 300 ಕೋಟಿ ರೂ.ಗಳ ವೆಚ್ಚದಲ್ಲಿ ಬಳ್ಳಾರಿಯ ವಿಮಾನ ನಿಲ್ದಾಣಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದುಎಂದು ನಗರ ಶಾಸಕ ನಾರಾ ಭರತ್‌ರೆಡ್ಡಿ ಹೇಳಿದರು.ಗುರುವಾರ ನವೀಕರಣಗೊಂಡ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯಕಟ್ಟಡಉದ್ಘಾಟನೆಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ನಾನು, ಮಾಜಿ ಸಚಿವ ಬಿ.ನಾಗೇಂದ್ರ, ಸಂಸದರಾದಡಾ.ಸಯ್ಯದ್ ನಾಸಿರ್ ಹುಸೇನ್ ಹಾಗೂ ತುಕಾರಾಂಅವರು ಬದ್ಧತೆಯನ್ನು ಹೊಂದಿದ್ದೇವೆಎಂದು ಹೇಳಿದ ಅವರುಕಲ್ಯಾಣಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ 300 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೂಲಭೂತ ಸೌಕರ್ಯಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದರು.
ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಕೇಂದ್ರದ ನಾಗರಿಕ ವಿಮಾನಯಾನರಾಜ್ಯ ಸಚಿವರಾಂ ಮೋಹನ್ ನಾಯ್ಡು ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆಚರ್ಚಿಸಲಾಗುವುದುಎಂದು ಹೇಳಿದ ಶಾಸಕ ನಾರಾ ಭರತ್‌ರೆಡ್ಡಿ, ಸಂಸದಡಾ.ಸಯ್ಯದ್ ನಾಸಿರ್ ಹುಸೇನ್, ರಾಹುಲ್‌ಗಾಂಧಿಯವರ ಸಹಕಾರದೊಂದಿಗೆ ಮುನ್ನಡೆಯಲಾಗುವುದೆಂದರು.ತಮ್ಮೆಲ್ಲರ ಬಹುದಿನಗಳ ಬೇಡಿಕೆಯಾಗಿರುವ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕಾಮಗಾರಿಗೆ ಪ್ರಾಥಮಿಕ ಹಂತದಲ್ಲಿ 11 ಕೋಟಿ ರೂ.ಗಳ ಮಂಜೂರಾತಿಗೆಕ್ರಮ ಕೈಗೊಳ್ಳಲಾಗಿದ್ದು, ಮಾರುಕಟ್ಟೆಯ ನಿರ್ಮಾಣದಿಂದ ಬೆಳೆಗಾರರಿಗೆ, ವ್ಯಾಪಾರಸ್ಥರಿಗೆ ಅನುಕೂಲ ಆಗಲಿದೆಎಂದರು. ಚೇಂಬರ್‌ಆಫ್‌ಕಾಮರ್ಸ್ ನ ಆಡಳಿತ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ನೀವು ಏನೇ ಬೇಡಿಕೆತಂದರೂಅದನ್ನುಈಡೇರಿಸುವ ಪ್ರಯತ್ನ ಮಾಡುವೆ, ನಿಮ್ಮ ಸಹಕಾರವೂ ನನಗೆ ನಮ್ಮ ಪಕ್ಷಕ್ಕೆಇರಲಿ ಎಂದರು.ಚೇಂಬರ್‌ಆಫ್‌ಕಾಮರ್ಸ್ ಸೇರಿದಂತೆ ನಗರದ ವಿವಿಧ ವ್ಯಾಪಾರೋದ್ಯಮ ಸಂಘ ಸಂಸ್ಥೆಗಳಿಂದ, ರೈತರಿಂದ ಶಾಸಕ ಸಂಸದರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಮೇಯರ್ ಮುಲ್ಲಂಗಿ ನಂದೀಶ್, ಸಂಸದರಾದಡಾ.ಸಯ್ಯದ್ ನಾಸಿರ್ ಹುಸೇನ್, ಈ.ತುಕಾರಾಂ, ಲಿಡ್ಕರ್‌ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಚೇಂಬರ್‌ಆಫ್‌ಕಾಮರ್ಸ್ ನ ಅಧ್ಯಕ್ಷಯಶವಂತರಾಜ್ ನಾಗಿರೆಡ್ಡಿ, ಅವ್ವಾರು ಮಂಜುನಾಥ, ಕೆ.ಸಿ.ಸುರೇಶಬಾಬು, ಕಾಂಗ್ರೆಸ್ ಮುಖಂಡ ಸುಬ್ಬರಾಯುಡು, ಹಗರಿಗೋವಿಂದ, ಪಾಲಣ್ಣ ಮತ್ತಿತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 