ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಸಾಧನೆ: ಐಶ್ವರ್ಯರಾಠೋಡ್

ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಸಾಧನೆ: ಐಶ್ವರ್ಯರಾಠೋಡ್ Aishwarya Rathod achieves hat-trick in shot put competition

ಕೊಪ್ಪಳ 11: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಕುಮಾರಿ ಶರಣೇಶ್ವರಿ ರಶ್ಮೀ ಮಹಿಳಾ ಬಿ.ಎಡ್ ಕಾಲೇಜು ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 19ನೇ ಅಂತರ್ ಕಾಲೇಜು ಅಥಲೆಟಿಕ್ಸ್‌ ಕ್ರೀಡಾಕೂಟ 2025-26ನೇ ಸಾಲಿನಲ್ಲಿ ದಿ. 5/11/25 ರಿಂದ 07/11/2025ರ ವರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿ ಕ್ರೀಡಾಂಗಣದಲ್ಲಿ ನಡೆದವು.  

ಸದರಿ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ಐಶ್ವರ್ಯ ಎಂ ರಾಠೂಡ್ ಇವರು ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಈ ಹಿಂದೆ 2023-24ನೇ ಸಾಲಿನಲ್ಲಿ 20.63 ಮೀಟರ್ ದೂರ ಎಸೆದು ದಾಖಲೆ ನಿರ್ಮಿಸಿದ್ದಳು. ನಂತರ ಕಳೆದ ವರ್ಷ 2024-25 ಸಾಲಿನಲ್ಲಿ 25.23 ಮೀಟರ್ ದೂರ ಎಸೆದು ತಾನೇ ನಿರ್ಮಿಸಿದ ದಾಖಲೆಯನ್ನು ಮುರಿದಿದ್ದಳು. ಈಗ 2025-26 ನೇ ಸಾಲಿನಲ್ಲಿ 27.30 ಮೀಟರ್ ದೂರ ಎಸೆದು ತನ್ನ ಹಳೆಯ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿ ಸರಪಳಿ ಗುಂಡು ಎಸೆತ ಸ್ಪರ್ಧೆಯಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾಳೆ. 

ಗ್ರಾಮೀಣ ಕ್ರೀಡಾಪಟುವಿನ ಈ ಸಾಧನೆಯನ್ನು ಮೆಚ್ಚಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯವು 5000 ರೂಪಾಯಿಗಳ ನಗದು ಹಾಗೂ ಪ್ರಶಸ್ತಿ ಪಾರಿತೋಷಕಗಳನ್ನು ನೀಡಿ ಗೌರವಿಸಿದೆ. ಅದೇ ರೀತಿ ನಮ್ಮ ಕಾಲೇಜಿನ ವಿದ್ಯಾರ್ಥಿನೀಯರಾದ ದೇವಮ್ಮ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಗೂ ಪಾರ್ವತಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕ್ರಮವಾಗಿ 6ನೇ ಮತ್ತು 7ನೇ  ಸ್ಥಾನವನ್ನು ಗಳಿಸಿದ್ದಾರೆ. ವಿದ್ಯಾರ್ಥಿನೀಯರ ಈ ಸಾಧನೆಗಳಿಗೆ ಕಾಲೇಜಿನ ಪ್ರಾಶುಪಾಲರಾದ ಡಾ.ಗಣಪತಿ.ಕೆ ಲಮಾಣಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ ಪ್ರದೀಪ್ ಕುಮಾರ್ ಯು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿನೀಯರು ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.