ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
Ajmer Ali Death: Funeral today
ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
ಕೊಪ್ಪಳ 05 : ರಾಜ್ಯ ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ. ಸೈಯದ್ ಅವರ ಅಳಿಯ,ಡಾ.ಎ,ಪಿ,ಜಿ, ಅಬ್ದುಲ್ ಕಲಾಂ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವರು ಸಹೋದರಿಯರು, ಓರ್ವ ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿ, 6-ರ ಬುದುವಾರ ರಂದು ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ ಗ್ರಾಮದ ಮುಸ್ಲಿಂ ಖಬರಸ್ಥಾನದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸುದ್ದಿ ತಿಳಿದ ತಕ್ಷಣ ಕೊಪ್ಪಳ ಜಿಲ್ಲೆಯ ವಿವಿಧ ಸಂಘಟನೆಗಳು ಸಮಾಜದ ಸಂಘಟನೆಗಳು ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದಯಪಾಲಿಸಲೆಂದು ಆ ಸೃಷ್ಟಿಕರ್ತ ಅಲ್ಲಾಹನಲ್ಲಿ ಪ್ರಾರ್ಥಿಸಿದ್ದಾರೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 