ಅಕ್ಕಮಹಾದೇವಿ ಜಯಂತಿ: ಕೊಪ್ಪಳಕ್ಕೆ ಇಂದು ವಾರ್ತಾವಾಚಕಿ ಡಾ, ಪ್ರಿಯಾ ಹರೀಶ್ ಆಗಮನ
ಕೊಪ್ಪಳ 11: ನಗರದ ಕೋಟೆ ರಸ್ತೆಯಲ್ಲಿರುವ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ದಿ, 12ರ ಶನಿವಾರ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ವಿಶೇಷ ಆಮಂತ್ರಿತರಾಗಿ ದಕ್ಷಿಣ ಕನ್ನಡ ಮಂಗಳೂರಿನ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್ ಪಾಲ್ಗೊಳ್ಳಲಿದ್ದಾರೆ ಹಾಗೂ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಕ್ರಮ ಆಯೋಜನೆ ಮಾಡಿದ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾದ ಕೋಮಲಾ ಕುದುರಿ ಮೋತಿ ರವರು ವಹಿಸಲಿದ್ದಾರೆ, ಸಂಸದ ಕೆ, ರಾಜಶೇಖರ್ ಹಿಟ್ನಾಳ ಮತ್ತು ಶಾಸಕ ಕೆ, ರಾಘವೇಂದ್ರ ಹಿಟ್ನಾಳ ಸೇರಿದಂತೆ ಅನೇಕ ಗಣ್ಯರು ಮತ್ತು ಮಹಿಳಾ ಮುಖಂಡರು ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಕ್ಕಮಹಾದೇವಿ ಮಹಿಳಾ ಮಂಡಲದ ಪದಾಧಿಕಾರಿಗಳು ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.