ಮಹಿಳೆ ಕಾಣೆ : ಪತ್ತೆಗಾಗಿ ಮನವಿ
Akshata Channappa Gudadinni is missing
ವಿಜಯಪುರ 28: ಜಿಲ್ಲೆಯ ಆಲಮಟ್ಟಿ ನಿವಾಸಿ ಹಾಲಿ ವಿಜಯಪುರದ ಜೈ ಕರ್ನಾಟಕ ಕಾಲನಿ ನಿವಾಸಿಯಾದ 26 ವರ್ಷದ ಅಕ್ಷತಾ ತಂದೆ ಚನ್ನಪ್ಪ ಗುಡದಿನ್ನಿ ಎಂಬ ಮಹಿಳೆ ದಿ. 15-09-2025 ರಿಂದ ಕಾಣೆಯಾಗಿರುವ ಕುರಿತು ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಕಾಣೆಯಾಗಿರುವ ಮಹಿಳೆ ಪತ್ತೆಗಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಕಾಣೆಯಾದ ಮಹಿಳೆಯು ಗೋದಿಗೆಂಪು ಮೈ ಬಣ್ಣ, ಅಂದಾಜು 5.4 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ದುಂಡುಮುಖ, ನೆಟ್ಟನೆಯ ಮೂಗು ಹೊಂದಿದ್ದಾಳೆ. ಕನ್ನಡ ಮತ್ತು ಹಿಂದಿ ಭಾಷೆ ಬಲ್ಲವಳಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬೂದು ಬಣ್ಣದ ಟಾಫ್ ಚೂಡಿದಾರ ಹಾಗೂ ಬಿಳಿ ಬಣ್ಣದ ಲೆಗ್ ಜೀನ್ಸ್ ಧರಿಸಿದ್ದಳು. ಈ ಚಹರೆಪಟ್ಟಿಯುಳ್ಳ ಮಹಿಳೆ ಬಗ್ಗೆ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಗೋಲಗುಂಬಜ್ ಪೊಲೀಸ್ ಠಾಣೆ ಅಥವಾ ದೂ: 08352-250214, ಸಿಪಿಐ ಕಚೇರಿ ದೂ: 08352-250252, ಡಿಪಿಓ ದೂ: 08352-253100, ಎಸ್‌ಪಿ ಕಚೇರಿ ದೂ: 08352-250152 ಸಂಖ್ಯೆಗೆ ಮಾಹಿತಿ ನೀಡಲು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 