ಡಿಎಂಕೆಯ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ: ಗೃಹ ಸಚಿವ ಅಮಿತ್ ಶಾ

All DMK leaders have master's degree in corruption: Home Minister Amit Shah

ಕೊಯಮತ್ತೂರು 26: 2026ರಲ್ಲಿ ಲೋಕಸಭಾ ಕ್ಷೇತ್ರ ವಿಂಗಡಣೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.

ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. ತಮಿಳುನಾಡಿನಲ್ಲಿ ರಾಷ್ಟ್ರವಿರೋಧಿ ಪ್ರವೃತ್ತಿ ಸರ್ವಕಾಲಿಕವಾಗಿದೆ. ಡಿಎಂಕೆಯ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದರು.

2026ರಲ್ಲಿ ಲೋಕಸಭಾ ಕ್ಷೇತ್ರ ವಿಂಗಡಣೆ ನಂತರ ತಮಿಳುನಾಡು ಲೋಕಸಭಾ ಕ್ಷೇತ್ರಗಳ ಸಂಖ್ಯೆ 39 ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಅವರು ತಳ್ಳಿಹಾಕಿದ್ದಾರೆ.

ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಅಂತ್ಯ ಹಾಡಲು ಯತ್ನಿಸುತ್ತಾ, ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯವು ಕ್ಷೇತ್ರ ವಿಂಗಡಣೆ ಮಾಡಿದಾಗ ಸಂಸತ್ತಿನಲ್ಲಿ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂದು ಅಮಿತ್ ಶಾ ಪ್ರತಿಪಾದಿಸಿದರು.

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ ಮತ್ತು ಅಕ್ರಮ ಗಣಿಗಾರಿಕೆ ಮಾಫಿಯಾ ಇಲ್ಲಿ ರಾಜಕೀಯವನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು.