ಜ 31 ರಿಂದ ಅಖಿಲ ಭಾರತ ಬ್ಯಾಂಕ್ ಮುಷ್ಕರ; ಸಕಾರಾತ್ಮಕ ಫಲಶ್ರುತಿ ಇಲ್ಲದೆ ಸಂಧಾನ ಸಭೆ ಅಂತ್ಯ
ಹೈದರಾಬಾದ್ / ನ, ಜ 27 : ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ (ಯುಎಫ್ ಬಿಯು) ಜ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಕೇಂದ್ರ ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರ ದೆಹಲಿಯ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ಯಾವುದೇ ಸಕಾರಾತ್ಮಕ ಫಲಶ್ರತಿ ದೊರೆತಿಲ್ಲ.
ಸಭೆಯಲ್ಲಿ ಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯುಎಫ್ ಬಿಯು ಕಡೆಯಿಂದ ಬ್ಯಾಂಕ್ ನೌಕರರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಯುಎನ್ಐಗೆ ತಿಳಿಸಿದ್ದಾರೆ.
ಶೇ 20ರಷ್ಟು ಏರಿಕೆಯೊಂದಿಗೆ ವೇತನ ಪರಿಷ್ಕರಣೆ ಇತ್ಯರ್ಥ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರೆ ನೀಡಲಾಗಿರುವ ಎರಡು ದಿನಗಳ ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರ.
ಮುಷ್ಕರದಲ್ಲಿ ಎಐಬಿಇಎ, ಎಐಬಿಒಸಿ, ಎನ್‌ಸಿಬಿಇ, ಎಐಬಿಒಎ, ಬಿಎಫ್‌ಐ, ಐಎನ್‌ಬಿಇಎಫ್, ಐಎನ್‌ಬಿಒಸಿ, ಎನ್‌ಒಬಿಡಬ್ಲ್ಯೂ ಮತ್ತು ಎನ್ ಒಬಿಒ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳು ಪಾಲ್ಗೊಳ್ಳಲಿವೆ.
ಮುಂದಿನ ಮಾರ್ಚ್ 11 ರಿಂದ ದೇಶಾದ್ಯಂತ ಮೂರು ದಿನಗಳ ಮುಷ್ಕರ ಮತ್ತು ಬರುವ ಏಪ್ರಿಲ್ 1 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಯುಎಫ್‌ಬಿಯು ತೀರ್ಮಾನಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 