ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ : ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು
All India Students' Council: Scholarships should be released
ಯರಗಟ್ಟಿ : ವಿದ್ಯಾರ್ಥಿ ವೇತನ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಸರ್ಮಪಕ ಬಸ್ ಓಡಿಸಬೇಕು. ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪಟ್ಟಣದ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ಬಂದು ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಪಣಿರಾಘವೇಂದ್ರ ದೇಸಾಯಿ ಮಾತನಾಡಿದ ಅವರು ಕೋವಿಡ್ ಸಂದರ್ಭದಲ್ಲಿ ವಿದ್ಯಾರ್ಥಿ ವೇತನ ದೊರಕದ ಕಾರಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಸದ್ಯ ಕಾಲೇಜುಗಳು ಆರಂಭವಾಗಿವೆ. ತರಗತಿಗೆ ಹಾಜರಾಗಲು ವಿವಿಧ ಊರುಗಳ ವಿದ್ಯಾರ್ಥಿಗಳು ನಗರ, ಪಟ್ಟಣಗಳಲ್ಲಿ ಇರುವ ಕಾಲೇಜುಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳ ಹಾಸ್ಟೆಲ್ ಮಾತ್ರ ತೆರೆದಿದ್ದು, ಉಳಿದ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ದೂರಿದರು.
ಎಲ್ಲ ಕಾಲೇಜು ಹಾಸ್ಟೆಲ್‌ಗಳನ್ನು ಆರಂಭಿಸಬೇಕು. ತಾಲೂಕಿನ ಎಲ್ಲಾ ಗ್ರಾಮಗಳಿಗೂ ಬಸ್ ಓಡಿಸಬೇಕು. ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಸ್ ಪಾಸ್ ಕೊಡಬೇಕು. ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರು ಇಲ್ಲದ ವಿಷಯಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು. ಅವರಿಗೆ ವರ್ಷದ 12 ತಿಂಗಳು ವೇತನ ನೀಡಬೇಕು. ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾರಿಗೆ ನಿಯಂತ್ರಣಾಧಿಕಾರಿ ಎಲ್. ಆಯ್. ಹಕಾಟಿ, ಪಿಎಸ್‌ಐ ಎಲ್. ಬಿ. ಮಾಳಿ, ಪಿಸಿಗಳಾದ ಎಂ. ಬಿ. ಸಣ್ಣನಾಯಕ, ಎಸ್. ಎಸ್. ಹುಂಬಿ, ಆರ್. ಎಸ್ ತೇಳಿ ಪರಿಷತ್ ನಗರ ಘಟಕದ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸಮನಿ, ಹನಮಂತ ಕಾರೆಪ್ಪನ್ನವರ, ನಾಗರಾಜ ಕತ್ತಿ, ಸಾಗರ ಹೂಗಾರ, ನಾಗರಾಜ ಇಟಗೌಡ್ರ, ವಿದ್ಯಾರ್ಥಿಗಳಾದ ಕಾವೇರಿ ಉಳ್ಳಾಗಡ್ಡಿ, ಮಲ್ಲಮ್ಮ ಅಮಚಿ, ಕೀರ್ತಿ, ಕಡಕೋಳ, ಶ್ರಾವಣಿ, ಸಿದ್ದನಗೌಡ್ರ, ಅಕ್ಷತಾ ಪಟ್ಟೇದ, ರೂಪಾ ಹಣಬರ, ತೇಜಸ್ವಿನಿ ಈಳಿಗೇರ, ದೇವರಾಜ ಯರಗಣವಿ, ಗಣೇಶ ಹಿರೇಮಠ, ಮೌನೇಶ ಬಡಿಗೇರ, ಸಮೀರ ಮುಗಟಖಾನ, ಶಾಹೀದ ಜಮಾದಾರ ಮತ್ತು ರೈತ ಸಂಘದ ಸೋಮು ರೈನಾಪೂರ, ಸಿಂದೂರ ತೆಗ್ಗಿ, ದಲಿತ ಮುಖಂಡ ಚಿದಂಬರ ಕಟ್ಟಿಮನಿ, ಅಶೋಕ ನಂದಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 