ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತ

ಲೋಕದರ್ಶನ ವರದಿ

ಚಿಕ್ಕೋಡಿ ಜುಲೈ 12: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೃಷ್ಣಾ, ವೇದಗಂಗಾ ಮತ್ತು ಧೂದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಮುಳುಗಡೆಗೊಂಡಿದ್ದ ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.

ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್ನಿಂದ  44,125  ಕ್ಯೂಸೆಕ್ ನೀರು ಹಾಗೂ ದೂಧಗಂಗಾ ನದಿಯಿಂದ 10,912 ಕ್ಯೂಸೆಕ್ ನೀರು ಹೀಗೆ ಒಟ್ಟು 55,037 ಕ್ಯೂಸೆಕ್ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 19 ಮಿ.ಮೀ ನವಜಾ - 09 ಮಿಮೀ, ಮಹಾಬಲೇಶ್ವರ - 11 ಎಂಎಂ, ವಾರಣಾ - 12 ಎಂಎಂ, ಕಾಳಮ್ಮವಾಡಿ - 30 ಎಂಎಂ, ರಾಧಾನಗರಿ - 13 ಎಂಎಂ, ಪಾಟಗಾಂವ - 38 ಎಂಎಂ ಮಳೆಯಾಗಿದ್ದು ವರದಿಯಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.

ದೂಧಗಂಗಾ ನದಿಗೆ ನಿಮರ್ಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಕೂಡಾ ಸಂಚಾರಕ್ಕೆ ಮುಕ್ತವಾಗಿವೆ.