ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ನ್ಯಾ. ಹೊಸಮನೆ
All departments should work together to prevent human trafficking: Justice Hosamane
ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ನ್ಯಾ. ಹೊಸಮನೆ
ಬಳ್ಳಾರಿ 30: ಮಾನವ ಕಳ್ಳ ಸಾಗಾಣಿಕೆತಡೆಗೆಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರಅದನ್ನುತಡೆಯಲು ಸಾಧ್ಯವಾಗುತ್ತದೆಎಂದುಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದರಾಜೇಶ್‌ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆತಡೆ ದಿನಾಚರಣೆ” ನಗರದಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಗಂಣದಲ್ಲಿಜಿಲ್ಲಾ ಮತ್ತುತಾಲ್ಲೂಕು ಮಟ್ಟದ ವಿವಿಧ ಸಹಭಾಗೀದಾರರಇಲಾಖೆಯ ಅಧಿಕಾರಿಗಳಿಗೆ ಹಾಗೂ ಕಾವಲು ಸಮಿತಿಯ ಸದಸ್ಯರಿಗೆ ಬುಧವಾರ ಏರಿ್ಡಸಿದ್ದ ಜಿಲ್ಲಾ ಮಟ್ಟದಒಂದು ದಿನದಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನನ್ನು ಕೊಂಡುಕೊಳ್ಳಲು ಕಾನೂನಿನಲ್ಲಿಅವಕಾಶವಿಲ್ಲ. ಕಡಿಮೆ ವರ್ಷದ ಮಕ್ಕಳನ್ನು ದುಡ್ಡಿನ ಆಮೀಷ ಒಡ್ಡಿ ಮಾರಾಟ ಮಾಡಲಾಗುತ್ತಿದ್ದು, ಇದು ಕಾನೂನು ಪ್ರಕಾರತಪ್ಪು.ಸಮಾಜದಲ್ಲಿ ಇದೀಗ ಮಾನವ ಕಳ್ಳ ಸಾಗಾಣಿಕೆಯು ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದ್ದು, ಅದರಲ್ಲೂ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಬಲಿಯಾಗುತ್ತಿರುವವರು ಮಹಿಳೆಯರು ಮತ್ತು ಮಕ್ಕಳು.ಇದರಿಂದಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.
ಬಡತನ, ನಿರುದ್ಯೋಗ, ತಂದೆ-ತಾಯಿಗಳಿಗೆ ವಿದ್ಯಾಭ್ಯಾಸದಕೊರತೆಇವೆಲ್ಲವೂ ಮಾನವ ಕಳ್ಳ ಸಾಗಾಣಿಕೆಗೆದಾರಿಯಾಗುತ್ತದೆ.ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನುತಡೆಯಬೇಕು.ಮಕ್ಕಳನ್ನು ತುಂಬಾಜಾಗೃತೆಯಿಂದ ಬೆಳೆಸಲು ಹೆಚ್ಚು ಅರಿವು ಮೂಡಿಸುವಕಾರ್ಯವಾಗಬೇಕುಎಂದರು.ಅಂಗನವಾಡಿಕೇಂದ್ರ ಮತ್ತು ಶಾಲೆಗಳಲ್ಲಿ ಮಕ್ಕಳು ಗೈರಾಗಿದ್ದಲ್ಲಿ ಹಾಜರಾತಿ ನೀಡಬಾರದು.ಮನೆ ಭೇಟಿ ನೀಡಬೇಕು.ವಾಸ್ತವ ಪರೀಶೀಲಿಸಬೇಕು.ಇದರಿಂದ ಆ ಮಗು ನಾಪತ್ತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಲ್ಲಿತೊಡಗಿಕೊಂಡಿದೆಎಂಬುದು ಪತ್ತೆಯಾಗುತ್ತದೆ.ಮಗು ಗೈರಾಗಿದ್ದು, ಹಾಜರಾತಿ ನೀಡಿದಲ್ಲಿ ಆ ದಿನ ಆ ಮಗು ಕಾಣೆಯಾಗಿದ್ದಲ್ಲಿಅಥವಾ ಬಾಲ್ಯವಿವಾಹದಂತಹಘಟನೆ ಸಂಭವಿಸಿದಲ್ಲಿ ನೀವೇ ಜವಾಬ್ದಾರರಾಗುತ್ತೀರಿಎಂದುಅಂಗನವಾಡಿಕಾರ್ಯಕರ್ತೆಯರಿಗೆ ಎಚ್ಚರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಘಟಕದಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆದಂಧೆಯು ಸಮಾಜದಕಪ್ಪುಚುಕ್ಕೆಯಾಗಿ ಪರಿಣಮಿಸಿದ್ದು, ಮಾನವ ಕಳ್ಳ ಸಾಗಾಣಿಕೆಯು ವಿದ್ಯಾವಂತರಿಂದಲೇ ನಡೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆಎಂದು ವಿಷಾಧ ವ್ಯಕ್ತಪಡಿಸಿದರು.ಕಾರ್ಯಾಗಾರ ಆರಂಭಕ್ಕೂ ಮುನ್ನ ನ್ಯಾಯಾಧೀಶರಾದರಾಜೇಶ್‌ಎನ್.ಹೊಸಮನೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಜಿಲ್ಲಾ ನಿರೂಪಣಾಧಿಕಾರಿ ಸವಿತ.ಸಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್‌ಠಾಣೆಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹನುಮಂತಪ್ಪ, ಬಳ್ಳಾರಿ (ನಗರ) ಹಾಗೂ (ಗ್ರಾಮಾಂತರ) ಶಿಶು ಅಭಿವೃದ್ಧಿಯೋಜನಾಧಿಕಾರಿ ಮೋಹನ್‌ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರೀವೀಕ್ಷಣಾಧಿಕಾರಿಈಶ್ವರ್‌ರಾವ್ ಸೇರಿದಂತೆಅಂಗನವಾಡಿಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಅಧಿಕಾರಿ, ಸಿಬ್ಬಂದಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 