ತಾಲೂಕು ಘಟಕಕ್ಕೆ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ
All office bearers elected unopposed to the taluk unit
ಕುಷ್ಟಗಿ 16: ತಾಲೂಕು ಘಟಕಕ್ಕೆ ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಜಿಲ್ಲಾಧ್ಯಕ್ಷರಾದ ಹನುಮಂತ ಹಳ್ಳಿಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್.ವೈ, ರಾಜ್ಯ ಸಮಿತಿ ಸದಸ್ಯರಾದ ವೀರಣ್ಣ ಕಳ್ಳಿಮನಿ ಹಾಗೂ ಕಾರ್ಯದರ್ಶಿ ರವೀಂದ್ರ ಬಾಕಳೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಬಸವರಾಜ ಪಲ್ಲೇದ್ ಅವರ ನೇತೃತ್ವದಲ್ಲಿ ಇಂದು ತಾಲೂಕ ಘಟಕದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿ, ತಾಲೂಕ ಘಟಕಕ್ಕೆ ನೂತನ ಅಧ್ಯಕ್ಷರ ಹಾದಿಯಾಗಿ ಎಲ್ಲಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು*ಅಧ್ಯಕ್ಷರಾಗಿ ಪವಾಡೇಪ್ಪ ಚೌಡ್ಕಿ, ಉಪಾಧ್ಯಕ್ಷರಾಗಿ ಶರಣಪ್ಪ ಲೈನೆದ್, ಚಂದ್ರಶೇಖರ ಕುಂಬಾರ್, ಪ್ರಧಾನ ಕಾರ್ಯದರ್ಶಿ ಅನಿಲ್ ಕಮ್ಮಾರ್, ಕಾರ್ಯದರ್ಶಿಯಾಗಿ ಶರಣಪ್ಪ ನವಲಹಳ್ಳಿ, ಖಾಜಾಸಾಬ ಮುದಗಲ್, ಖಜಾಂಚಿಯಾಗಿ ಭೀಮಸೇನರಾವ್ ಕುಲಕರ್ಣಿ, ತಾಲೂಕಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಂಗಮೇಶ ಲೂಟಿಮಠ, ಭೀಮನಗೌಡ ಪಾಟೀಲ್, ಏಕನಾಥ ಮೆದಕೇರಿ, ಮುತ್ತು ಗ್ವಾತಗಿ ಆಯ್ಕೆಯಾಗಿದ್ದಾರೆ.*ಈ ಸಂದರ್ಭದಲ್ಲಿ ಮಾಜಿ ತಾಲೂಕು ಅಧ್ಯಕ್ಷ ವೆಂಕಟೇಶ ಕುಲಕರ್ಣಿ, ಹಿರಿಯ ಪತ್ರರಾದ ಶ್ರೀನಿವಾಸ ಜಾಗೀರದಾರ, ಸಂಗಮೇಶ ಸಿಂಗಾಡಿ, ವಿ.ಆರ್ ತಾಳಿಕೋಟಿ, ವಸಂತ ಸಿನ್ನೂರು, ಶಿವರಾಜ ಬಂಡಿಹಾಳ, ಎನ್.ಶಾಮೀದ್, ಪರಶಿವಮೂರ್ತಿ ಮಾಟಲದಿನ್ನಿ,ಬಿ.ಎಮ್.ಅಲಂದ್ದಾರ, ಮಾರುತಿ ಕುಷ್ಟಗಿ ಸೇರಿದಂತೆ ಹಲವಾರು ಪತ್ರಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 