ನೀಟ್ ಪರೀಕ್ಷೆಗೆ ಸಕಲ ಸಿದ್ಧತೆ ಕಟ್ಟುನಿಟ್ಟಿನ ಭದ್ರತೆ ಹಾಗೂ ಪಾರದರ್ಶಕತೆಗೆ ಸೂಚನೆ
All preparations for NEET exam, strict security and transparency advised
ಲೋಕದರ್ಶನ ವರದಿ
ಹಾವೇರಿ 20: ಜಿಲ್ಲೆಯಲ್ಲಿ ಭಾನುವಾರ ನಡೆಯಲಿರುವ ರಾಷ್ಟೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ)ಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಸೂಚಿಸಿದರು.
ಗಾಂಧಿಪುರ ಸರ್ಕಾರಿ ಪದವಿ ಕಾಲೇಜು ಗಾಂಧಿಪುರ ಹಾಗೂ ನಗರದ ಜಿ.ಹೆಚ್. ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿ, ಅಗತ್ಯ ಪೂರ್ವ ಸಿದ್ಧತೆಗಳನ್ನು ಪರೀಶೀಲಿಸಿದ ಅವರು ಪರೀಕ್ಷಾ ಕೊಠಡಿಗಳು, ಅಭ್ಯರ್ಥಿಗಳ ಆಸನ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಪರೀಕ್ಷೆಯು ರಾಷ್ಟ್ರೀಯ ಮಟ್ಟದ ಮಹತ್ವದ ಪರೀಕ್ಷೆಯಾಗಿರುವುದರಿಂದ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವುದರ ಜೊತೆಗೆ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಅಭ್ಯರ್ಥಿಗಳ ಪರೀಶೀಲನೆ, ಪ್ರವೇಶ ದ್ವಾರಗಳ ನಿರ್ವಹಣೆ ಹಾಗೂ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷೆಯು ಯಾವುದೇ ಅಡಚಣೆ ಇಲ್ಲದೆ ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರ ನೀಡಿದರು. ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ನೀಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಮರ್ಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 