ಸೋಮವಾರದಿಂದ ತಾಲೂಕಿನಾದ್ಯಂತ ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ
All preparations for school opening ceremony across the taluk from Monday
ಲೋಕದರ್ಶನ ವರದಿ
ಯರಗಟ್ಟಿ 30 : 2026 - 27ನೇ ಸಾಲಿನ ಶಾಲೆಗಳು ಮೇ 29 ರಿಂದ (ಶುಕ್ರವಾರ) ಪುನರಾರಂಭಗೊಳ್ಳಲಿವೆ. ಬೇಸಿಗೆ ರಜೆಯ ಮಜಾ ಬಳಿಕ ಶಾಲೆಗೆ ಆಗಮಿಸುತ್ತಿರುವ ಮಕ್ಕಳ ಸ್ವಾಗತಕ್ಕೆ ಶಾಲೆಗಳಲ್ಲಿ ಸಜ್ಜಾಗಿವೆ. ಇನ್ನೂ ಈ ವರ್ಷ 245 ದಿನಗಳು ಶಾಲೆ ನಡೆಯಲಿದ್ದು, 119 ದಿನ ರಜೆ ಇರಲಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ಮಾಹಿತಿ ಪ್ರಕಟಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಪ್ರಾರಂಭೋತ್ಸವವನ್ನು ಹಬ್ಬದಂತೆ ಆಚರಿಸಲು ಸಿದ್ಧತೆ ಕೈಗೊಂಡಿದೆ. ಹಬ್ಬದ ವಾತಾವರಣದಡಿ ಶೈಕ್ಷಣಿಕ ಕಾರ್ಯಗಳಿಗೆ ಚ್ಯುತಿ ಬಾರದಂತೆ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ. ದಾಖಲಾತಿ ಹಬ್ಬ ಶಾಲೆಗಳು ಆರಂಭವಾದ ಮರುದಿನವೇ, ಅಂದರೆ ಮೇ 30 ರಿಂದ ರಾಜ್ಯಾದ್ಯಂತ ಶಾಲಾ 'ದಾಖಲಾತಿ ಹಬ್ಬ'ವನ್ನು ಸಡಗರದಿಂದ ಆಚರಿಸಲಾಗುವುದು. ಜೂನ್ 30ರ ಒಳಗೆ ಎಲ್ಲಾ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 