ಪ್ರತಿಭೆ ಮತ್ತು ಕ್ರೀಡಾ ಮನೋಭಾವದಿಂದ ವಿದ್ಯಾರ್ಥಿಗಳ ಸವಾಂರ್ಗೀಣ ವಿಕಾಸ ಸಾಧ್ಯ
All-round development of students is possible through talent and sportsmanship
ಲೋಕದರ್ಶನ ವರದಿ
ಹಾವೇರಿ 09: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವುದರ ಜೊತೆಗೆ ನಾಯಕತ್ವ, ಶಿಸ್ತು, ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ತಂಡದ ಮನೋಭಾವವನ್ನು ಬೆಳೆಸುವಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಾ ವೈದ್ಯಾಧಿಕಾರಿಗಳಾದ ಡಾಽಽ ಪಿ. ಆರ್. ಹಾವನೂರ ಹೇಳಿದರು. ಅವರು ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಒಕ್ಕೂಟಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿ ಜೀವನವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವನ್ನು ಸಂಪಾದಿಸುವ ಅವಧಿಯಲ್ಲ. ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಭಾಷಣ, ಚರ್ಚೆ, ಕ್ರೀಡೆ ಹಾಗೂ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಸೋಲು-ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಕಲಿಸಿದರೆ, ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ಸೃಜನಶೀಲತೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವನ್ನು ವಿಸ್ತರಿಸುತ್ತವೆ. ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಒಕ್ಕೂಟಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಪ್ರಮುಖ ವೇದಿಕೆಗಳಾಗಬೇಕು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಯಾವುದಾದರೂ ಒಂದು ವಿಶಿಷ್ಠ ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರತರುವ ಜವಾಬ್ದಾರಿ ಶಿಕ್ಷಣ ಸಂಸ್ಥೆ ಮತ್ತು ಅಧ್ಯಾಪಕರ ಮೇಲಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಒಕ್ಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾಽಽ ಎಸ್. ಎಲ್. ಬಾಲೇಹೊಸೂರ ಮಾತನಾಡಿ, ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ವಿದ್ಯಾರ್ಥಿಗಳ ಸವಾಂರ್ಗೀಣ ಬೆಳವಣಿಗೆಗೆ ಅಗತ್ಯವಾದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 