ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ತಮ್ಮ ಆದ್ಯತೆ: ಶಾಸಕ ಯಾಸಿರ್ಖಾನ್ ಪಠಾಣ್

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ತಮ್ಮ ಆದ್ಯತೆ: ಶಾಸಕ ಯಾಸಿರ್ಖಾನ್ ಪಠಾಣ್  All-round development of the constituency is my priority: MLA Yasir Khan Pathan


ಶಿಗ್ಗಾವಿ, ಆ. 23: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಾಸಕ ಯಾಸಿರ್ಖಾನ್ ಪಠಾಣ್ ಹೇಳಿದರು.  ತಾಲೂಕಿನ ಬಾಡ ಹಾಗೂ ಹುನುಗುಂದ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬಾಡ ಗ್ರಾಮದಲ್ಲಿ ?30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಸಿಸಿ ಕಾಲುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರ ಮತ್ತು ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.  

ಹುನುಗುಂದ ಗ್ರಾಮದಲ್ಲಿ ?65 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆಸ್ಪತ್ರೆ ಕಟ್ಟಡದ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು. ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲು ಈ ಆಸ್ಪತ್ರೆ ಸಹಕಾರಿಯಾಗಲಿದೆ ಎಂದು ಶಾಸಕ ಯಾಸಿರ್ಖಾನ್ ಪಠಾಣ್ ತಿಳಿಸಿದರು.  ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಹಂತ ಹಂತವಾಗಿ ಎಲ್ಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.  ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಗಳ ಹಿರಿಯರು, ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.