ಕೊಪ್ಪಳ 23: ಎ.ಪಿ.ಎಲ್. ಮತ್ತು ಬಿ.ಪಿ.ಎಲ್. ಕಾರ್ಡ್ ಹಾಗೂ ಆಧಾರ್ ಕಾಡರ್್ನಲ್ಲಿನ ವಯಸ್ಸಿನ ಆಧಾರದ ಮೇಲೆ 60ವರ್ಷ ತುಂಬಿದ ವೃದ್ದಾಪ್ಯರಿಗೆ, ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ಸಕರ್ಾರದಿಂದ ನೀಡುವ ಮಾಸಿಕ ವೇತನಗಳು 2020ರ ಜನವರಿಯಿಂದ ತಪ್ಪದೇ ಫಲಾನುಭವಿಗಳ ಮನೆಗಳಿಗೆ ನೇರವಾಗಿ ತಲುಪಬೇಕು ಎಂದು ಕಂದಾಯ ಇಲಾಖೆ ಸಕರ್ಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಮಂಜುನಾಥ ಪ್ರಸಾದ ಎನ್. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು (ಡಿ. 23) ಆಯೋಜಿಸಿದ್ದ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷಾ ಯೋಜನೆ ಮತ್ತು ಮೃತ ರೈತ ಪತ್ನಿಗೆ ನೀಡುವ ವಿಧವಾ ವೇತನಗಳಲ್ಲಿ ಆಧಾರ್ ಸೆಂಡಿಂಗ್, ಕೆ-1 ನಿಂದ ಕೆ-2ಗೆ ವಗರ್ಾವಣೆ ಮತ್ತು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಶೇ.100 ರಷ್ಟು ಆಧಾರ ಜೋಡಣೆ ಮತ್ತು ಬಾಹಶಃ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ 60 ವರ್ಷ ವಯೋಮಿತಿ ಹೊಂದಿದ ಫಲಾನುಭವಿಗಳನ್ನು ಗುರುತಿಸಿ ಅವರಿಂದ ದಾಖಲೆಗಳನ್ನು ಪಡೆದು ನೇರವಾಗಿ ವೃದ್ಧಾಪ್ಯ ವೇತನ ಮಂಜೂರಿಸಬೇಕು. ಜಿಲ್ಲೆಯಲ್ಲಿ ಮಾಸಿಕ ಪಿಂಚಣಿಗಳನ್ನು ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅವರ ಮನೆಗೆ ತಲುಪುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಕನಕಗಿರಿ, ಕಾರಟಗಿ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲು ಸಂಬಂಧಪಟ್ಟ ತಹಶೀಲ್ದಾರರು ಕೂಡಲೇ ಅವಶ್ಯವಿರುವ ಜಮೀನನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಜಿಲ್ಲೆಯ ಮೃತ ರೈತರ ಪತ್ನಿಯರಿಗೆ ಮಾಸಿಕ 2,000 ಸಾವಿರ ರೂ.ಗಳ ಮಾಸಿಕ ವೇತನ ಹಾಗೂ ರೈತರ ಸಾಲ ಮನ್ನಾ ಯೋಜನೆಯಲ್ಲಿ ಯಾವುದೇ ಪ್ರಕ್ರಿಯೆ ಬಾಕಿ ಉಳಿಯದಿರಲಿ. ಈ ನಿಟ್ಟಿನಲ್ಲಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಿ. ಕೃಷಿ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳು ಎಲ್ಲಾ ವರ್ಗದ ಅರ್ಹ ರೈತರಿಗೆ ತಲುಪುವಂತಾಗಲಿ ಎಂದರು.
ಪರಿಶಿಷ್ಟ ಜಾತಿಯವರಿಗೆ ರುಧ್ರಭೂಮಿನ್ನು ಒದಗಿಸಲು ಸರ್ಕಾರದ ಜಾಗ ಇಲ್ಲದಿದ್ದಲ್ಲಿ ಖಾಸಗಿ ಭೂಮಿಯನ್ನು ಖರೀಸಿದಿ ಸೌಕರ್ಯ ಒರಿದಗಿಸಬೇಕು. ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಂಬಂಧ ಪಟ್ಟ ಅಧಿನಿಯಮ-2013 ರನ್ವಯ ಯೋಜನೆಗಳನ್ನು ಕಾರ್ಯರುಪಕ್ಕೆ ತನ್ನಿ. ಅಲ್ಲದೇ ನಿಮರ್ಾಣವಾಗುತ್ತಿರುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಸಮೂದಾಯಗಳಿಗೆ ಭೂಮಿಯನ್ನು ಒದಗಿಸಲು ಯಾವ ರೀತಿ ಕ್ರಮ ಕೈಗೊಂಡಿದ್ದಿರಿ ಎಂದು ಪ್ರಶ್ನಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ ಅವರು ಮಾತನಾಡಿ, ದೇವದಾಸಿ ಮಹಿಳೆಯರಿಗೆ ಕೃಷಿ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಭೂ ರಹಿತ ಕೃಷಿ ಕಾಮರ್ಿಕ ಮಹಿಳೆಯರಿಗೆ ಅಲೆಮಾರಿ ಅಭಿವೃದ್ಧಿ ಕೋಶದ ವತಿಯಿಂದ ಭೂ ಒಡೆತನ ಯೋಜನೆಯಲ್ಲಿ ಕೃಷಿ ಜಮೀನು ನೀಡಲು ಭೂ ಮಾಲೀಕರಿಂದ ಜಮೀನುಗಳನ್ನು ಖರೀದಿಸಲು ಸರ್ಕಾರವು ಮಂಜೂರಾತಿ ನೀಡಿದ್ದು, ಶೀಘ್ರದಲ್ಲಿ ಫಲಾನುಭವಿಗಳಿಗೆ ಭೂಮಿ ನೀಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತನಾಡಿ, ಜಿಲ್ಲೆಯಲ್ಲಿ ಹಾಸ್ಟೆಲ್ಗಳ ದಿನಗೂಲಿ ನೌಕರರ ಸಂಬಳದ ಸಮಸ್ಯೆಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಮಾಹಿತಿಯನ್ನು ಸಲ್ಲಿಸಬೇಕು. ಇವುಗಳಿಗೆ ಅಗತ್ಯವಿರುವ ವಿದ್ಯುತ್ ಸಂಪರ್ಕವನ್ನು ಒದಗಿಸಲು ಜೆಸ್ಕಾ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಸಿಸಿ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿ.ಡಿ.ಎಲ್.ಆರ್. ಮತ್ತು ಎ.ಡಿ.ಎಲ್.ಆರ್ಗಳ ಖಾಲಿ ಹುದ್ದೆಗಳ ಭತರ್ಿ ಸೇರಿದಂತೆ ಮುಖ್ಯವಾದ ಸಮಸ್ಯೆಗಳನ್ನು ಸಕರ್ಾರದ ಮಟ್ಟದಲ್ಲಿ ಕ್ರಮ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ. ಎಂ.ಪಿ. ಮಾರುತಿ, ಜಿ.ಪಂ. ಉಪ ಕಾರ್ಯದರ್ಶಿ ಎನ್.ಕೆ ತೊರವಿ, ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್, ತೋಟಗಾರಿಕೆ ಉಪನಿದರ್ೇಶಕ ಕೃಷ್ಣ ಉಕ್ಕುಂದ, ಡಿ.ಹೆಚ್.ಒ ಡಾ. ಲಿಂಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.