ಕಾನಿಪ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಅಲ್ಲಾಪುರ ಆಯ್ಕೆ

ಕಾನಿಪ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಅಲ್ಲಾಪುರ ಆಯ್ಕೆ Allapura selected as a nominated member of the KANIPA Association's district executive committee

ಲೋಕದರ್ಶನ ವರದಿ 

ಸಿಂದಗಿ 02: ವಿಜಯಪುರ ಪತ್ರಿಕಾ ಭವನದಲ್ಲಿ ಜೂ.30ರಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಸಿಂದಗಿಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಅಲ್ಲಾಪುರ ಅವರನ್ನು ನಾಮ ನಿರ್ದೇಶಿತ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.  

 ಹಿರಿಯ ಪತ್ರಕರ್ತರಾಗಿರುವ ಮಲ್ಲಿಕಾರ್ಜುನ ಅಲ್ಲಾಪುರ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ. ಜಿಲ್ಲೆಯ ಪತ್ರಕರ್ತರ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷರಾದ ಅಶೋಕ ಯಡಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.