ಪ್ರತಿಭಟನೆ ತಡೆಯಲು ಹಿಂದೂ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಆರೋಪ
Allegation of filing false cases against Hindu leaders to prevent protests
ಶಿಗಾಂವಿ, ಆ.25: ನೀಚ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿಂದೂ ಸಮುದಾಯದ ಮುಖಂಡರ ವಿರುದ್ಧ ಪೊಲೀಸ್ ಇಲಾಖೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಆಡಳಿತಾರೂಢ ಪಕ್ಷದವರ ಮಾತಿನಂತೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಪ್ರತಿಭಟನೆ ಹತ್ತಿಕ್ಕಲು ಒಳಸಂಚು ರೂಪಿಸುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ಆರೋಪಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು, ನೀಚ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿಂದೂಗಳ ಮೇಲೆ ಪೊಲೀಸರು ಯಾರದೋ ಮಾತು ಕೇಳಿ ಎಫ್‌ಐಆರ್ ದಾಖಲಿಸುತ್ತಿರುವುದು ಹಾಗೂ ಹಿಂದೂಗಳ ಮೇಲೆಯೇ ಕ್ರಮ ಕೈಗೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ರಾಷ್ಟ್ರವಾದ ನಮ್ಮ ದೇಶದಲ್ಲಿ ಹಿಂದೂಗಳ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಕೃತ್ಯಗಳ ವಿರುದ್ಧ ಧ್ವನಿ ಎತ್ತಿದವರನ್ನೇ ಪ್ರಕರಣಗಳಲ್ಲಿ ಸಿಲುಕಿಸುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೇಣುಕನಗೌಡ ಪಾಟೀಲ, ಶಿವಯೋಗಿ ಹುಲಸೋಗಿ, ಶ್ರೀಕಾಂತ ಬುಳ್ಳಕ್ಕನವರ, ದಯಾನಂದ ಅಕ್ಕಿ, ಅನಿಲ್ ಸಾತಣ್ಣವರ, ಸಚಿನ್ ಮಡಿವಾಳರ, ವಿವೇಕ ರಾಮಗೇರಿ, ಸಂತೋಷ ದೊಡ್ಡಮನಿ, ಮಂಜುನಾಥ ಮಿರ್ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 