ಅಕ್ರಮ ಲೇಔಟ್ ಆರೋಪ: ಕ್ರಮಕ್ಕೆ ಆಗ್ರಹಿಸಿ ಆ. ೩೧ರಂದು ಪ್ರತಿಭಟನೆ
Allegations of illegal layout: Protest on August 31 demanding action.
ಕೊಪ್ಪಳ, ಆ. ೨೪: ಕುಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭಾರೀ ಭ್ರಷ್ಟಾಚಾರದ ಕುರಿತು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ಪುರದಿಯವರನ್ನು ಎತ್ತಂಗಡಿ ಮಾಡಬೇಕು ಹಾಗೂ ಅಕ್ರಮ ಲೇಔಟ್ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ (ನೋಂ.) ವತಿಯಿಂದ ಆ. ೩೧ರಂದು ಕೊಪ್ಪಳ ತಾಲೂಕು ಪಂಚಾಯಿತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಟಿ.ಕ್ಯಾ. ನಾಯಕ ತಿಳಿಸಿದ್ದಾರೆ.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ. ೮೮ರ ಪಕ್ಕದಲ್ಲಿರುವ ಸರ್ಕಾರಿ ಪರಂಪೋಕು ಭೂಮಿಯನ್ನು ದುರ್ಬಳಕೆ ಮಾಡಿಕೊಂಡು, ಬಡವರ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ನಿಯಮಬಾಹಿರವಾಗಿ ಅಕ್ರಮ ಲೇಔಟ್ ನಿರ್ಮಿಸಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.
ಅಕ್ರಮ ಲೇಔಟ್ನಲ್ಲಿ ನಿವೇಶನ ಪಡೆದ ಫಲಾನುಭವಿಗಳಿಗೆ ಕುಡಿಯುವ ನೀರು, ವಿದ್ಯುತ್, ಒಳಚರಂಡಿ ಹಾಗೂ ರಸ್ತೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸದೆ ವಂಚಿಸಲಾಗಿದೆ. ಅಲ್ಲದೆ, ಲೇಔಟ್ಗೆ ಸಂಬAಧಿಸಿದ ಯಾವುದೇ ದಾಖಲೆಗಳನ್ನು ಸಮರ್ಪಕವಾಗಿ ಹಾಜರುಪಡಿಸಿಲ್ಲ ಎಂದು ಅವರು ದೂರಿದರು.
ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸುಮಾರು ?೪೦ ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ ?೧೨ ಲಕ್ಷಕ್ಕೂ ಅಧಿಕ ಮೊತ್ತದ ೧೫ನೇ ಹಣಕಾಸು ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ಹಣವನ್ನು ಕೂಡಲೇ ಸರ್ಕಾರಕ್ಕೆ ಮರುಪಾವತಿಸಬೇಕು ಎಂದು ಆಗ್ರಹಿಸಿದರು.
ದಾಖಲೆಗಳ ಸೃಷ್ಟಿ ಆರೋಪ
ಗ್ರೇಡ್-೨ ಹುದ್ದೆಯಲ್ಲಿದ್ದ ಅಧಿಕಾರಿಗಳು ಅಕ್ರಮ ಲೇಔಟ್ಗೆ ಸಂಬAಧಿಸಿದ ದಾಖಲೆಗಳನ್ನು ಸೃಷ್ಟಿಸಿ ಲಂಚ ಪಡೆದಿರುವುದಲ್ಲದೆ, ವ್ಯಾಪಕ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಿದರೂ ಸಮರ್ಪಕ ಉತ್ತರ ನೀಡದೆ ಸಾರ್ವಜನಿಕರ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂದು ಟೀಕಿಸಿದರು.
ಈ ಎಲ್ಲ ಅಕ್ರಮಗಳನ್ನು ತಡೆಯುವಲ್ಲಿ ವಿಫಲವಾಗಿರುವ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ತಕ್ಷಣವೇ ಎತ್ತಂಗಡಿ ಮಾಡಬೇಕು. ಅಕ್ರಮ ಲೇಔಟ್ಗಳನ್ನು ರದ್ದುಪಡಿಸಿ, ಸಮಗ್ರ ತನಿಖೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಆ. ೩೧ರಂದು ಬೃಹತ್ ಪ್ರತಿಭಟನೆ
ಆ. ೩೧ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಟಿಕ್ಯಾ ನಾಯಕ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಜಯ ದಾಸ ಕೌಜ್ಗೇರಿ, ರಾಮಲಿಂಗಯ್ಯ ಶಾಸ್ತಿöçಮಠ, ಮಹೇಶ್ ಬಿಚ್ಚಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 