ಮೊರಾರ್ಜಿ ವಸತಿ ಶಾಲೆ ಅಕ್ರಮಗಳ ಆರೋಪ: ಸಿಐಡಿ ತನಿಖೆಗೆ ಕರವೇ ಆಗ್ರಹ
Allegations of irregularities at Morarji Residential School: KaRaVe demands CID probe
ಲೋಕದರ್ಶನ ವರದಿ
ಮುಂಡಗೋಡ 10: ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಬೆಳವಣಿಗೆಗಳ ಕುರಿತು ಸಮಗ್ರ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ವತಿಯಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಾಲೆಯಲ್ಲಿ ಹಲವು ವರ್ಷಗಳಿಂದ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ನಡೆಯುತ್ತಿರುವ ವಿಚಾರಣೆಯನ್ನು ಕೇವಲ ಇತ್ತೀಚಿನ 2ಹಿ3 ತಿಂಗಳ ಅವಧಿಗೆ ಸೀಮಿತಗೊಳಿಸದೆ, ಕಳೆದ 7ಹಿ8 ವರ್ಷಗಳ ಆಡಳಿತಾತ್ಮಕ ವ್ಯವಹಾರಗಳು, ಗುತ್ತಿಗೆ ಹಾಗೂ ನೇಮಕಾತಿ ಪ್ರಕ್ರಿಯೆಗಳನ್ನೂ ಪರೀಶೀಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮರುನೇಮಕಾತಿಯಲ್ಲಿ ಹಣದ ವ್ಯವಹಾರ ನಡೆದಿದೆ ಎಂಬ ವದಂತಿಗಳ ಬಗ್ಗೆಯೂ ಪರೀಶೀಲನೆ ನಡೆಸುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಶಾಲೆಗೆ ಸಂಬಂಧಿಸಿದ ಎಲ್ಲ ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸುವ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೀಶ ದೈವಜ್ಞ, ಮಂಜುನಾಥ ಕೆಮಣಕೇರಿ, ಪುಟ್ಟಣ್ಣ ಮಿಶ್ರಿಕೋಟಿ, ಕೃಷ್ಣ ಭೋವಿ ವಡ್ಡರ್, ವೀರಣ್ಣ ವಡ್ಡರ್, ರಾಜೇಶ್ ಸುಣಗಾರ, ರಾಮು ಗೌಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 