ಸಿ ಎಂ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್ಒಗೆ ನೋಟಿಸ
Allegations of medical security lapses during CM's tour: Notice issued to DHO
ಬೆಳಗಾವಿ 21: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇತ್ತೀಚಿನ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ವೈದ್ಯಕೀಯ ಭದ್ರತೆ ಹಾಗೂ ವಿಐಪಿ ಶಿಷ್ಟಾಚಾರ ಪಾಲನೆಯಲ್ಲಿ ಗಂಭೀರ ಲೋಪಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಒ) ಡಾ. ಈಶ್ವರ ಗಡಾದ ಅವರಿಗೆ ಜಿಲ್ಲಾಡಳಿತ ಶೋಕಾಸ ನೋಟಿಸ ಜಾರಿ ಮಾಡಿದೆ.9-7-2026 ರಂದು ಬೆಳಗಾವಿಯಲ್ಲಿ ನಡೆದ ವಿಭಾಗೀಯ ಮಟ್ಟದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದ್ದ ವೇಳೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೈಗೊಳ್ಳಬೇಕಿದ್ದ ವೈದ್ಯಕೀಯ ಭದ್ರತಾ ಕ್ರಮಗಳಲ್ಲಿ ಸರಿಯಾಗಿ ಕೆಲಸ ಮಾಡದ ವಾಸ್ತವ ಕಂಡುಬಂದಿದೆ ಎಂದು ಪರೀಶೀಲನೆಯಲ್ಲಿ ತಿಳಿದುಬಂದಿದೆ.
ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿ ಪ್ರವಾಸದ ಸಂದರ್ಭದಲ್ಲಿ ಅತ್ಯಾಧುನಿಕ ಜೀವರಕ್ಷಕ ಉಪಕರಣಗಳನ್ನು ಹೊಂದಿರುವ ಎಡ್ವಾನ್ಸ್ಡ ಲೈಫ್ ಸಪೋರ್ಟ್ ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರ ತಂಡವನ್ನು ಕಡ್ಡಾಯವಾಗಿ ನಿಯೋಜಿಸಬೇಕಾಗಿತ್ತು, ಆದರೆ, ಸಾಮಾನ್ಯ ಅಂಬುಲೆನ್ಸ್ನ್ನು ಮಾತ್ರ ನಿಯೋಜಿಸಿರುವುದು ಮುಖ್ಯಮಂತ್ರಿಗಳ ಆರೋಗ್ಯ ಭದ್ರತೆಯಲ್ಲಿ ಗಂಭೀರ ನಿರ್ಲಕ್ಷ್ಯ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ, ಮುಖ್ಯಮಂತ್ರಿ ತಂಗಿದ್ದ ಸ್ಥಳದಲ್ಲಿ ಹಿರಿಯ ತಜ್ಞ ವೈದ್ಯರನ್ನು ನಿಯೋಜಿಸುವ ಬದಲು ವೈದ್ಯಕೀಯ ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ವಿಐಪಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಪ್ರವಾಸದ ಅವಧಿಯಲ್ಲಿ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರದೆ, ಜಿಲ್ಲಾಡಳಿತದೊಂದಿಗೆ ಸಮರ್ಕ ಸಮನ್ವಯ ಸಾಧಿಸದಿರುವುದು ಡಿಎಚ್ಒ ವಿರುದ್ಧದ ಪ್ರಮುಖ ಆರೋಪಗಳಲ್ಲಿ ಒಂದಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಈಶ್ವರ ಗಡಾದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ಗೆ ಏಳು ದಿನಗಳೊಳಗೆ ಸಮರ್ಕ ಲಿಖಿತ ವಿವರಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಮರ್ಕ ಉತ್ತರ ನೀಡದಿದ್ದಲ್ಲಿ ಸೇವೆಯಿಂದ ಅಮಾನತು ಸೇರಿದಂತೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 