ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ- ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಫೆ 6,ಗುರುವಾರ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ 10 ಸಚಿವರಿಗೆ ಫೆ 8 ರೊಳಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಮಾಣ ವಚನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆ ಕುರಿತಂತೆ ದೆಹಲಿಗೆ ತಾವು ತೆರಳುತ್ತಿದ್ದು, ಭೇಟಿ ದಿನಾಂಕವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು. ದೆಹಲಿ ಭೇಟಿ ವೇಳೆ ಸಚಿವ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳನ್ನು ಬಿಜೆಪಿ ಶಾಸಕರಿಗೆ ನೀಡುವ ಕುರಿತು ಕೇಂದ್ರ ನಾಯಕತ್ವದೊಂದಿಗೆ ಚಚಿಸಲಾಗುವುದು ಎಂದು ಹೇಳಿದರು.
ಪಕ್ಷದ ಶಾಸಕರಲ್ಲಿನ ಅಸಮಾಧಾನದಿಂದಾಗಿ ಬಿಜೆಪಿಯ ಹಿರಿಯ ಶಾಸಕರ ಸೇರ್ಪಡೆ ಕೊನೆಯ ಕ್ಷಣದಲ್ಲಿ ಸ್ಥಗಿತಗೊಂಡಿದೆ. ಎಂಟು ಬಾರಿ ಆಯ್ಕೆಯಾಗಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.ಹಿಂದಿನ ಕಾಂಗ್ರೆಸ್-ಜೆಡಿ (ಎಸ್) ಮೈತ್ರಿಕೂಟದಿಂದ ಪಕ್ಷಾಂತರಗೊಂಡು ಡಿಸೆಂಬರ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದ 10 ಶಾಸಕರನ್ನು ಮುಖ್ಯಮಂತ್ರಿ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.ಆದರೆ. ಚುನಾವಣೆಯಲ್ಲಿ ಗೆದ್ದಿರುವ ಮತ್ತೊಬ್ಬ ಶಾಸಕ ಅಥಣಿಯ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. ಕುಮಟಳ್ಳಿಗೆ ಯಡಿಯೂರಪ್ಪ ಅವರು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಅಸಮಧಾನಗೊಂಡಿರುವ ಕುಮಟಳ್ಳಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 