ಬೆಂಗಳೂರು, ಮೇ 8,ಮೂರನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಇದೀಗ ಲಾಡ್ಜ್, ಬಾರ್, ಕ್ಲಬ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.ಅಬಕಾರಿ ಸಚಿವ ಎಚ್. ನಾಗೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ನಾಳೆಯಿಂದ ಲಾಡ್ಜ್, ಬಾರ್, ಕ್ಲಬ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಂಆರ್‌ಪಿ ಬೆಲೆಯಲ್ಲಿ ಮಾರಾಟ ಮಾಡಲು ಸೂಚನೆ ನೀಡಲಾಗಿದೆ. ಎಂಆರ್‌ಪಿ ಬೆಲೆಗಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಅವರ ಲೈಸನ್ಸ್ ಖಾಯಂ ರದ್ದು ಮಾಡಲಾಗುವುದು ಎಂದು ತಿಳಿಸಿದರು.ಇದರ ಜವಾಬ್ದಾರಿ ಬಾರ್ ಮಾಲಕರದ್ದಾಗಿದೆ. ಮದ್ಯವನ್ನು ಖರೀದಿ ಸಮಯವನ್ನು ಬೆಳಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ ಅವರು, ವರ್ಷಕ್ಕೆ ಅಬಕಾರಿ ಆದಾಯ ಸರ್ಕಾರಕ್ಕೆ 25 ಸಾವಿರ ಕೋಟಿ ಬರಲಿದೆ. ಈ ವರ್ಷ 2500 ಕೋಟಿ ಹೆಚ್ಚಾಗಲಿದೆ. 22,500 ಕೋಟಿ ಆದಾಯಕ್ಕೆ ಹೆಚ್ಚುವರಿಯಾಗಿ 2500 ಕೋಟಿ ಸಿಗಲಿದೆ ಎಂದು ನಾಗೇಶ್ ಹೇಳಿದರು.ಸುಪ್ರೀಂ ಕೋರ್ಟ್ ನೀಡಿದ ಆದೇಶ ನೋಡಿಲ್ಲ. ಆನ್ ಲೈನ್ ಮಾರಾಟಕ್ಕೆ ಅವಕಾಶ ನೀಡಿದರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.