ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆತ, ಸೇರಿದಂತೆ ಬಹುತೇಕ ಎಲ್ಲಾ ಬಾಕಿ ಕೆಲಸಗಳು ಪೂರ್ಣ: ಗೃಹ ಸಚಿವ ಅಮಿತ್ ಶಾ

Almost all pending work, including withdrawal of special status granted to Jammu and Kashmir, comple

ಅಹಮದಾಬಾದ್: ಕಳೆದ 10 ವರ್ಷಗಳಲ್ಲಿ ಸಂವಿಧಾನದ 370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದು ಸೇರಿದಂತೆ ಎಲ್ಲಾ ಸೈದ್ಧಾಂತಿಕ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪೂರ್ಣಗೊಳಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯುತ್ತಿರುವ ಹಿಂದೂ ಆಧ್ಯಾತ್ಮಿಕ ಸೇವಾ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ದೇಶದಲ್ಲಿ 70 ವರ್ಷಗಳ ಕಾಲ ಆಡಳಿತ ನಡೆಸಿದ್ದ ಯಾವುದೇ ಸರ್ಕಾರಗಳು ಜಾರಿ ಮಾಡದಂತಹ ಹಲವು ಕಾರ್ಯಕ್ರಮಗಳನ್ನು ಮೋದಿ ಅವರು ಕೇವಲ 10 ವರ್ಷಗಳಲ್ಲಿ ಅನುಷ್ಠಾನಗೊಳಿಸಿದ್ದಾರೆ. ತಮ್ಮ ಮೂರನೇ ಅಧಿಕಾರಾವಧಿಯಲ್ಲಿಯೂ ಅದೇ ಹಾದಿಯಲ್ಲಿ ಮುಂದುವರಿಯಲಿದ್ದಾರೆ. ಈಗ 370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆಯಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ತ್ರಿವಳಿ ತಲಾಖ್ ರದ್ದತಿ, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಸೇರಿದಂತೆ ಬಹುತೇಕ ಎಲ್ಲಾ ಬಾಕಿ ಕೆಲಸಗಳು ಪೂರ್ಣಗೊಂಡಿವೆ’ ಎಂದು ಶಾ ಹೇಳಿದ್ದಾರೆ.

170 ದೇಶಗಳು ಯೋಗವನ್ನು ಒಪ್ಪಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಆದೇ ರೀತಿ ಜಿ–20 ಶೃಂಗಸಭೆಯ ವೇಳೆ ಪ್ರಪಂಚದಾದ್ಯಂತದ ನಾಯಕರು ಭಾರತಕ್ಕೆ ಬಂದು ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ಇದು ನಮಗೆ ಹೆಮ್ಮೆಯ ವಿಷಯವಾಗಿದೆ. ಕಳವಾಗಿದ್ದ 350ಕ್ಕೂ ಹೆಚ್ಚು ದೇವತೆಗಳ ವಿಗ್ರಹಗಳನ್ನು ಮರಳಿ ತರುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.