ನಿರಂತರ ಅಧ್ಯಯನದ ಜೊತೆಗೆ ವ್ಯಕ್ತಿತ್ವ ವಿಕಸನವು ಅತ್ಯಗತ್ಯ- ಡಾ. ಅಜಿತ ಪ್ರಸಾದ.
Along with continuous study, personality development is essential- Dr. Ajita Prasad.
ಲೋಕದರ್ಶನ ವರದಿ
ನಿರಂತರ ಅಧ್ಯಯನದ ಜೊತೆಗೆ ವ್ಯಕ್ತಿತ್ವ ವಿಕಸನವು ಅತ್ಯಗತ್ಯ- ಡಾ. ಅಜಿತ ಪ್ರಸಾದ.
ಧಾರವಾಡ 15: ವಿದ್ಯಾರ್ಥಿಗಳು ಪಠ್ಯದ ಜೊತೆ ಜೊತೆಗೆ ಕೌಶಲ್ಯಾಭಿವೃದ್ಧಿಗಾಗಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್ ಹಾಗೂ ಮುಂತಾದ ವಿಷಯಗಳ ತರಬೇತಿ ನೀಡುವುದರ ಮೂಲಕ ಗುಣಾತ್ಮಕ ಶಿಕ್ಷಣ ನೀಡುವುದರೊಂದಿಗೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಹೇಳಿದರು.
ನಗರದ ಜನತಾ ಶಿಕ್ಷಣ ಸಮಿತಿಯ ಆವರಣದಲ್ಲಿ ಮಂಜುನಾಥೇಶ್ವರ ಎಂ.ಸಿ.ಎ ಸಂಸ್ಥೆಯ “ದೀಕ್ಷಾ ಬೋಧನಾ ಸಮಾರಂಭ ಹಾಗೂ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಮಾಹಿತಿ ತಂತ್ರಜ್ಞಾನ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಿವಿಧ ಕೌಶಲ್ಯಾಭಿವೃದ್ಧಿಯ ತರಬೇತಿಗಳನ್ನು ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬೇಕೆಂದು ಕರೆ ನೀಡಿದರು. ಸತತ ಅಧ್ಯಯನ ಮತ್ತು ಶ್ರದ್ಧೆಯಿಂದ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ಯಾಂಪಸ್ ಸಂದರ್ಶನ ನಡೆಯಲಿವೆ. ಎಂ.ಸಿ.ಎ. ಸಂಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಸುಸಜ್ಜಿತ ಕೊಠಡಿ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಸೌಲಭ್ಯ ಮತ್ತು ನುರಿತ ಅಧ್ಯಾಪಕ ವೃಂದವಿದ್ದು, ಅವುಗಳ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿ ಶುಭಕೋರಿದರು.
ಅತಿಥಿಗಳಾದ “ಓರಿಜಿನ್ ಎಂಟರ್‌ಪ್ರೈಸ್”ನ ಸಿ.ಇ.ಓ. ಶ್ರೀ ರಾಬರ್ಟ ಗೌಡರ್ ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿಪರತರಬೇತಿಯ ಪ್ರಮಾಣಪತ್ರಗಳನ್ನು ವಿತರಿಸಿ, ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸ್ಟಡಿಕಿಟ್‌ನೀಡಿ ಮಹಾವಿದ್ಯಾಲಯಕ್ಕೆ ಸ್ವಾಗತಿಸಿ ಶುಭಕೋರಿದರು.
ಎಂ.ಸಿ.ಎ ಸಂಸ್ಥೆಯ ನಿರ್ದೇಶಕರಾದ ಡಾ. ಸೂರಜ್‌ಜೈನ್ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಮಂಜುನಾಥ ಪೂಜಾರ ಪರಿಚಯಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರೊ. ಬಾಹುಬಲಿ ಚಿವಟೆ ನಿರೂಪಿಸಿದರು. ಡಾ. ಬಸವರಾಜ ಜಿ., ವಂದಿಸಿದರು. ಡಾ.ಸುನಿಲ್‌ಕುಮಾರ ಹಿರೇಮಠ, ಪ್ರೊ. ಮಂಜುಳಾ ಕಲ್ಮಠ, ವಿದ್ಯಾರ್ಥಿಗಳು ಮತ್ತು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 