ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
Alumni reunion program
ಲೋಕದರ್ಶನ ವರದಿ
ಬೆಳಗಾವಿ 24 : ಗೋಕಾಕ ನಗರದ ಮುನಸಿಪಲ್ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಇತ್ತೀಚೆಗೆ ಹಳೆ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜರುಗಿತು. 1969-70ನೇ ಸಾಲಿನ 10ನೇ ತರಗತಿಯ ಮುನಸಿಪಲ್ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಗಳು ಸುಮಾರು 55 ವರ್ಷಗಳ ನಂತರ ಬೆಳಗಾವಿಯ ಸಭಾಭವನದಲ್ಲಿಒಂದೆಡೆ ಸೇರಿ ಸಂಭ್ರಮಿಸಿದರು. ಕೇಕ್ ಕತ್ತರಿಸುವ ಮೂಲಕ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದ ಸಿಹಿ-ಕಹಿ ನೆನಪುಗಳನ್ನು ಮೆಲುಕು ಹಾಕಿದರು.
ಬಳಿಕ , ಕಲಿಸಿದ ಗುರುಗಳ ಬಗ್ಗೆ ಮನದಾಳ ಹಂಚಿಕೊಂಡ ಶಿಷ್ಯರು : ‘ಗುರು-ಶಿಷ್ಯರ ಸಂಬಂಧ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಪವಿತ್ರ ಬಂಧವಾಗಿದೆ. ಇದುಜ್ಞಾನ, ಮಾರ್ಗದರ್ಶನ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಪೂರಕ’ ಎಂದು ಹೇಳಿದರು. ‘55 ವರ್ಷಗಳ ಹಿಂದೆಕಲಿತ ವಿದ್ಯಾರ್ಥಿಗಳು ಇಂದುಒಂದೆಡೆ ಸೇರಿ, ಅಭೂತಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸತಂದಿದೆ.
ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಪಡೆದುಉನ್ನತ ಸ್ಥಾನದಲ್ಲಿದ್ದೆವೆ ಎಂದು ಹೇಳಿದರು. ‘ನಮ್ಮ ಶಿಕ್ಷಕರು ಕೇವಲ ಪಠ್ಯ ಬೋಧಿಸಲಿಲ್ಲ. ಜೀವನದಲ್ಲಿ ಎದುರಾಗಬಹುದಾದ ಕಷ್ಟ ಹೇಗೆ ಎದುರಿಸಬೇಕು ಎಂಬುದನ್ನು ಕಲಿಸಿದರು. ಮಾದರಿಯಾಗಿ ನಮ್ಮ ಬದುಕು ರೂಪಿಸಿದರು’ ಎಂದು ಸ್ಮರಿಸಿದರು. ಕಾರ್ಯಕ್ರಮದ ಆಯೋಜಕರಾದ ಡಾ. ಅಶೋಕ ಮುರುಗೋಡ, ಶಶಿಕಾಂತ ಚುನಮರಿ ಮಧುಕರ, ಜಯಶ್ರೀ , ಶೋಭಾ , ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 