ಶಿಕ್ಷಕರಿಗೆ ಸಸಿ ನೀಡಿ ಪರಿಸರ ಜಾಗೃತಿ ಮೂಡಿಸಿದ ಹಳೆ ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಗುರು ಶಿಷ್ಯ ಪರಂಪರೆ ಒಂದಾಗಿದೆ: ಪ್ರೊ. ಪಟಾಯಿತ
Alumni who raised environmental awareness by giving saplings to teachers are part of the cultural ri
ಲೋಕದರ್ಶನ ವರದಿ
ಗೋಕಾಕ 26: ನಮ್ಮ ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಗುರು ಶಿಷ್ಯ ಪರಂಪರೆ ಒಂದು. ಅನುದಿನವು ಕಾಯಕ ಮಾಡುತ್ತಾ ನಮ್ಮ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು. ಗುರು ಶಿಷ್ಯರ ನಡುವೆ ಇರುವ ಸಂಬಂಧ ಭಾವನಾತ್ಮಕ ಸಂಬಂಧವಾಗಿದ್ದು ಜೊತೆಗೆ ಸ್ನೇಹಿತರಲ್ಲಿಯೂ ಅದೇ ಭಾವನಾತ್ಮಕ ಸಂಬಂಧವಿದೆ ಎಂದು ಗೋಕಾಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಲಕ್ಷ್ಮಣ ಪಟಾಯಿತ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ ಸನ್ 1999-2000 ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರು ವಂದನಾ ಕಾರ್ಯಕ್ರಮ ಹಾಗೂ ಸ್ನೇಹಿತರ ಪುನರ್ಮಿಲನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮನುಷ್ಯ ಸಮಾಜದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಉತ್ತಮ ಚಾರಿತ್ರ್ಯ ಮುಖ್ಯವಾಗಿದೆ ಎಂದರಲ್ಲದೇ ಚಾರಿತ್ರ್ಯವೇ ಜೀವನದ ಕೀರೀಟ ವಾಗಿದೆ. ಪ್ರಾಥಮಿಕ ಶಾಲೆಯಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಅವರಿಗೆ ಸತ್ಕಾರದ ಜೊತೆಗೆ ಸಸಿ ನೀಡಿ ಪರಿಸರ ಜಾಗೃತಿ ಮೂಡಿಸಿದ ಹಳೆ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಗುರು ಎಂ.ಆರ್.ಕಡಕೋಳ ಮಾತನಾಡಿ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡುತ್ತಾ ತಮ್ಮ ಉತ್ತಮ ಬದುಕು ಕಟ್ಟಿಕೊಂಡು ಜೀವನ ನಡೆಸುತ್ತಿರುವ ನಮಗೆ ತುಂಬಾ ಸಂತೋಷವಾಗಿದೆ ಎಂದರು.
ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್.ಎಸ್.ದೊಡಮನಿ ಮಾತನಾಡಿ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ನಾವು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿದ್ದು ತಾವುಗಳು ಕೂಡ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿ ಅವರನ್ನು ಜೀವನದಲ್ಲಿ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರೇರಣೆ ನೀಡಬೇಕೆಂದು ಕರೆ ನೀಡಿದರು. ವೇದಿಕೆ ಮೇಲೆ ಶಿಕ್ಷಕರಾದ ಎಸ್.ಆರ್.ತರಾಳ, ಎಸ್.ಎಲ್.ಅಂಬಿ, ಬಸವರಾಜ ಪೂಜೇರಿ, ಎಲ್.ಆರ್.ಭೋವಿ, ಟಿ.ಐ.ಕಟ್ಟಿಮನಿ, ಎಸ್.ಆರ್. ಅರಳಿಮಟ್ಟಿ, ಪಿ.ಎನ್.ಬಡಕುಂದ್ರಿ, ಆರ್.ಬಿ.ಕರೆಪ್ಪಗೋಳ, ವಿಠ್ಠಲ ಕರೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಮ್ಮ ಶಾಲೆಯ ದಿನಗಳನ್ನು ಸ್ಮರಿಸಿಕೊಂಡರು. ವಿದ್ಯೆ ಕಲಿಸಿದ ಶ್ರೀ ಸಿದ್ದರಾಮೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಸಂಗೀತಾ ಬಳಗಾರ ಸ್ವಾಗತಿಸಿದರು. ರಾಜೇಶ್ವರಿ ನಿಪ್ಪಾಣಿ ನಿರೂಪಿಸಿದರು. ನಾಗೇಶ್ ಬಂಬಲಾಡಿ ವಂದಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 