ಪೊಲೀಸರ, ಸೈನಿಕರ ತ್ಯಾಗ, ಬಲಿದಾನ ಸದಾ ಸ್ಮರಿಸಿ : ಮೆಳ್ಳಾಗಟ್ಟಿ
Always remember the sacrifices and bravery of police and soldiers: Mellagatti
ಪೊಲೀಸರ, ಸೈನಿಕರ ತ್ಯಾಗ, ಬಲಿದಾನ ಸದಾ ಸ್ಮರಿಸಿ : ಮೆಳ್ಳಾಗಟ್ಟಿ
ಶಿಗ್ಗಾವಿ 23: ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ, ಸೈನಿಕರ ತ್ಯಾಗ, ಬಲಿದಾನ ಸದಾ ಸ್ಮರಿಸಬೇಕು ಎಂದು ಕೆಎಸ್‌ಆರ್‌ಪಿ 10ನೇ ಪೊಲೀಸ್ ಪಡೆಯ ಕಮಾಂಡೆಂಟ್ ಎನ್.ಬಿ. ಮೆಳ್ಳಾಗಟ್ಟಿ ಹೇಳಿದರು. ತಾಲೂಕಿನ ಗಂಗೇಬಾವಿ ಕೆಎಸ್‌ಆರ್‌ಪಿ 10ನೇ ಪೊಲೀಸ್ ಪಡೆಯಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು ಭಾರತ ಹಾಗೂ ಚೀನಾದ ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರು ಮೃತಪಟ್ಟಿದ್ದರು.
ಅಂದಿನಿಂದ ದೇಶದಾದ್ಯಂತ ಪೊಲೀಸ್ ಸಿಬ್ಬಂದಿಯ ಗೌರವಾರ್ಥ ಪೊಲೀಸ್ ಹುತಾತ್ಮ ದಿನ ಆಚರಿಸಲಾಗುತ್ತಿದೆ ಎಂದರು. ನಿವೃತ್ತ ಡಿವೈಎಸ್‌ಪಿ ವೀರಣ್ಣ ಜರಾಳ ಮಾತನಾಡಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರು ದೇಶದ ಏಕತೆ, ಅಖಂಡತೆಗೆ ಅಪಾರ ಕೊಡುಗೆ ನೀಡಿದ್ದಾರೆ. ಸೇವೆಯ ಸಂದರ್ಭದಲ್ಲಿ ಒದಗಿ ಬಂದ ಪರಿಸ್ಥಿತಿ ಎದುರಿಸಲು ಯಾವುದೇ ಕಾರಣಕ್ಕೂ ನಮ್ಮ ಅತ್ಮಸ್ಥೆರ್ಯ ಕಳೆದುಕೊಳ್ಳಬಾರದು.
ಧೈರ್ಯದಿಂದ ಮುನ್ನುಗ್ಗಿ ನಮ್ಮ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದಾಗ ಮಾತ್ರ ನಮ್ಮ ಸೇವೆ, ಹೆಸರು ಅಜರಾಮರವಾಗಿರುತ್ತದೆ ಎಂದರು. ಪೊಲೀಸರಾಗಲಿ, ಸೈನಿಕರಾಗಲಿ ತಮ್ಮ ಸೇವೆಯ ಕರ್ತವ್ಯದ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ, ಆತ್ಮಸ್ಥೆರ್ಯ ಹೆಚ್ಚಿಸಿಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ಅಂದಾಗ ಮಾತ್ರ ನಮಗೆ ಯಶಸ್ಸು ಸಿಗಲು ಸಾಧ್ಯ ಎಂದರು.
ಕಾರ್ಯಕ್ರಮದ ಪೂರ್ವದಲ್ಲಿ ಆಕರ್ಷಕ ಪಥಸಂಚಲನ ನಡೆಸಿದ ಪೊಲೀಸರು, ಗೌರವ ಹುತಾತ್ಮರಿಗೆ ಸಲ್ಲಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಿಸಲಾಯಿತು. ಡೆಪ್ಯೂಟಿ ಕಮಾಡೆಂಟ್ ಮಂಜಪ್ಪ ಕೋಟಿಹಾಳ, ಸಹಾಯಕ ಕಮಾಡೆಂಟ್‌ಗಳಾದ ಸುಲೇಮಾನ ಹಂಚಿನಮನಿ, ವಿಶ್ವನಾಥ ನಾಯ್ಕ, ಶ್ರೀಧರ ವಾಶ್ಮೀರಿ, ಹನುಮೇಶ ಜಿ., ಸುರೇಶ ಡೆಂಬೇರ, ಕಿರಣ ಕೋಳೇಕರ್, ಇತರ ಪೋಲಿಸ್ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 