ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಬಂಗ್ಲೆ ಮಲ್ಲಿಕಾರ್ಜುನ
Always responsive to journalists' issues: Bangle Mallikarjuna
ಕೊಟ್ಟೂರು, ಆ.4: ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವುದಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹೇಳಿದರು. ಆಗಸ್ಟ್ 8ರಂದು ನೆಲಮಂಗಲದಲ್ಲಿ ನಡೆಯಲಿರುವ ರಾಜ್ಯಮಟ್ಟದ ನಾಲ್ಕನೇ ಸಮ್ಮೇಳನಕ್ಕೆ ಗಣ್ಯರನ್ನು ಆಹ್ವಾನಿಸಲು ಕೊಟ್ಟೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ 40 ವರ್ಷಗಳಿಂದ ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದು, ಮುಂದೆಯೂ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಆಗಸ್ಟ್ 8ರಂದು ನಡೆಯಲಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪತ್ರಕರ್ತರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಕೊಟ್ಟೂರಿನ ಹಿರಿಯ ರಾಜಕೀಯ ಮುಖಂಡ ಎಂ.ಎಂ.ಜೆ. ಹರ್ಷವರ್ಧನ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಪುತ್ರ ಶೋಭಿತ್ ಅವರಿಗೆ ಸಾಂತ್ವನ ಹೇಳಿದರು.
ತಮ್ಮ ತಂದೆಯಂತೆ ಜನಸೇವೆಯಲ್ಲಿ ತೊಡಗಿ ಉತ್ತಮ ರಾಜಕೀಯ ನಾಯಕನಾಗಿ ಬೆಳೆಯಬೇಕು ಎಂದು ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 