ಹವ್ಯಾಸಿ ಓದುವ ಪ್ರಶಸ್ತಿ ಪ್ರಧಾನ
ಸಿಂದಗಿ 19: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ಧೇಶದಿಂದ ಪಟ್ಟಣದ ವಿದ್ಯಾಚೇತನ ಪ್ರಕಾಶನವು ಪ್ರತಿವರ್ಷದಂತೆ ಪ್ರಸಕ್ತ ವರ್ಷದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಕೊಡಮಾಡುವ ಹವ್ಯಾಸಿ ಓದುವ ಪ್ರಶಸ್ತಿಗೆ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತಿಯ ಪಿಯುಸಿ ವಿದ್ಯಾರ್ಥಿ ದತ್ತಾತ್ರೇಯ ಬಂದ್ರಾಡ ಆಯ್ಕೆ ಆಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕೊಡಮಾಡುವ ಪುಸ್ತಕ ಮಿತ್ರ ಪ್ರಶಸ್ತಿಗೆ ಸಿಂದಗಿ ಪ್ರೇರನಾ ಪಬ್ಲಿಕ್ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ನಂದಿನಿ ಚವ್ಹಾಣ ಆಯ್ಕೆಯಾಗಿದ್ದಾರೆ ಎಂದು ಹ.ಮ. ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.