‘ರುದ್ರ ಗರುಡ ಪುರಾಣ’ದಿಂದ ಬಂತು ಅದ್ಭುತ ಟ್ರೇಲರ್
Amazing trailer from 'Rudra Garuda Purana'
ರಿಷಿ ಅಭಿನಯದ ಈ ಚಿತ್ರ ಜನವರಿ 24 ರಂದು ತೆರೆಗೆ
2025ರ ಬಹು ನೀರೀಕ್ಷಿತ ಚಿತ್ರಗಳಲ್ಲಿ ಒಂದಾದ, ಈಗಾಗಲೇ ಟೀಸರ್, ಹಾಡುಗಳ ಮೂಲಕ ಸಾಕಷ್ಟು ನೀರೀಕ್ಷೆ ಹುಟ್ಟಿಸಿರುವ ರಿಷಿ ನಾಯಕನಾಗಿ ನಟಿಸಿರುವ ‘ರುದ್ರ ಗರುಡ ಪುರಾಣ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ. ಹಾಗೆಯೇ ಕಳೆದವಾರವಷ್ಟೇ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ‘ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ ...’ ಎಂಬ ಹಾಡು ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಕೃಷ್ಣಪ್ರಸಾದ್ ಸಂಗೀತ ನೀಡಿರುವ ಈ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ. ಇದೀಗ ಟ್ರೇಲರ್‌ನಿಂದ ಪ್ರೇಕ್ಷಕರಿಗೆ ಹತ್ತಿರವಾಘುತ್ತಿರುವ ಈ ಚಿತ್ರ ಇದೇ ಜನವರಿ 24ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಮಿಸ್ಟ್ರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ರುದ್ರ ಗರುಡ ಪುರಾಣ’ದಲ್ಲಿ ಪ್ರೇಮ ಕಥೆಯೂ ಇದೆ. ಹೆಸರಾಂತ ನಿರ್ದೇಶಕ ಜೇಕಬ್ ವರ್ಗೀಸ್ ಅವರ ಬಳಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ನಂದೀಶ್ ನಿರ್ದೇಶನದ ಎರಡನೇ ಚಿತ್ರ ‘ರುದ್ರ ಗರುಡ ಪುರಾಣ’. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗೀರೀಶ್ ಶಿವಣ್ಣ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 