ನಿವೃತ್ತಿ ನಿರ್ಧಾರದ ಬಗ್ಗೆ ಯೂಟರ್ನ್ ಹೊಡೆದ ಅಂಬಾಟಿ ರಾಯುಡು
ನವದೆಹಲಿ, ಆ 30 ಐಸಿಸಿ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಿಲ್ಲವೆಂದು ಬೇಸತ್ತು ಅಂಬಾಟಿ ರಾಯುಡು ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದರು. ಇದೀಗ ಬಲಗೈ ಬ್ಯಾಟ್ಸ್ಮನ್ ಯೂ ಟರ್ನಿ ಹೊಡೆದಿದ್ದು ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂದಕ್ಕೆ ಪಡೆದಿದ್ದಾರೆ. ಜೂನ್ ತಿಂಗಳಲ್ಲಿ ತೆಗೆದುಕೊಂಡಿದ್ದ ಕ್ರಿಕೆಟ್ ವೃತ್ತಿ ಜೀವನ ನಿವೃತ್ತಿ ನಿರ್ಧಾರ ಭಾವುಕವಾದದ್ದು ಹಾಗಾಗಿ, ಮತ್ತೊಮ್ಮೆ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತೇನೆಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಮುಂದೆ ಆಯ್ಕೆಗೆ ಅಂಬಾಟಿ ರಾಯುಡು ಲಭ್ಯರಾಗಲಿದ್ದಾರೆ. "ಈ ಹಿಂದೆ ಘೋಷಿಸಿದ್ದ ಕ್ರಿಕೆಟ್ ನಿವೃತ್ತಿ ನಿರ್ಧಾರವನ್ನು ಹಿಂಪಡೆಯುತ್ತಿದ್ದೇನೆ. ಇನ್ನು ಮುಂದೆ ಎಲ್ಲ ಮಾದರಿಯ ಕ್ರಿಕೆಟ್ ಆಡುತ್ತೇನೆ ಎಂದು ಎಚ್ಸಿಎ ಹಾಗೂ ಕ್ರಿಕೆಟ್ ಆಡಳಿತ ಮಂಡಳಿಗೆ ರಾಯುಡು ಇ-ಮೈಲ್ ಮಾಡಿದ್ದಾರೆ. "ನನ್ನ ಕ್ರಿಕೆಟ್ ವೃತ್ತಿ ಜೀವನದ ಕಠಿಣ ಸಂದರ್ಭಗಳಲ್ಲಿ ಜತೆಗಿದ್ದ ಚೆನ್ನೈ ಸೂಪರ್ ಕಿಂಗ್ಸ್, ವಿವಿಎಸ್ ಲಕ್ಷ್ಮಣ್ ಹಾಗೂ ನೊಯಿಲ್ ಡೇವಿಡ್ ಅವರಿದೆ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಇವರು ನನ್ನು ದುಡಿಕಿನ ನಿರ್ಧಾರವನ್ನು ಅಥರ್ೆಸಿದ್ದರು" ಎಂದು ಹೇಳಿದ್ದಾರೆ. "ಮುಂಬರುವ ಆವೃತ್ತಿಯಲ್ಲಿ ಪ್ರತಿಭಾವಂತ ಹೈದರಾಬಾದ್ ತಂಡದ ಪರ ಆಡುತ್ತಿದ್ದೇನೆ. ಸೆ. 10 ರಿಂದ ಹೈದರಾಬಾದ್ ತಂಡಕ್ಕೆ ಲಭ್ಯನಾಗಲಿದ್ದೇನೆ ಎಂದರು. ಇಂಗ್ಲೆಂಡ್ ಹಾಗೂ ವೇಲ್ಸ್ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ವಿಶ್ವಕಪ್ ಟೂನರ್ಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಅಂಬಾಟಿ ರಾಯುಡು ವಿಫಲರಾಗಿದ್ದರು. ಆದರೆ, ಅವರಿಗೆ ಸ್ಟಾಂಡ್ ಬೈನಲ್ಲಿ ಸ್ಥಾನ ನೀಡಲಾಗಿತ್ತು. ಶಿಖರ್ ಧವನ್ ಗಾಯವಾಗಿದ್ದರು. ಇವರ ಬದಲು ವಿಜಯ್ ಶಂಕರ್ ಅವರಿಗೆ ಸ್ಥಾನ ನೀಡಲಾಗಿತ್ತು. ಇದರಿಂದ ಕೆರಳಿದ್ದ ರಾಯುಡು ಈ ಬಾರಿ ಐಸಿಸಿ ವಿಶ್ವಕಪ್ ನೋಡಲು 3ಡಿ ಗ್ಲಾಸ್ಗೆ ಆರ್ಡರ್ ಮಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದರು. ಆ ಮೂಲಕ ಆಯ್ಕೆದಾರ ಎಂ.ಎಸ್.ಕೆ ಪ್ರಸಾದ್ ಅವರ ವಿರುದ್ಧ ಕಿಡಿಕಾರಿದ್ದರು. ಕಳೆದ ವರ್ಷ ಇವರು ನಿಗದಿತ ಮಾದರಿ ಕಡೆ ಹೆಚ್ಚಿನ ಗಮನ ಹರಿಸಲು ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 