ಭಾರತ ಪ್ರಗತಿಗೆ ಅಂಬೇಡ್ಕರ್ ಕೊಡುಗೆ ಮುಖ್ಯ : ಶಿವರಾಜ ಶಿವಪುರ
ಕಂಪ್ಲಿ 27: ವಿಶ್ವದ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತವು ಪ್ರಗತಿ ಪಥದತ್ತ ಸಾಗುವಲ್ಲಿ ಅಂಬೇಡ್ಕರ್‌ಕೊಡುಗೆ ಹೆಚ್ಚಿನದ್ದು ಎಂದು ತಹಶೀಲ್ದಾರ್ ಶಿವರಾಜ ಶಿವಪುರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವೈವಿಧ್ಯತೆಯಿಂದ ಕೂಡಿರುವ ರಾಷ್ಟ್ರಕ್ಕೆ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿರ ಯನ ಮಾಡಿ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದ್ದಾರೆ.
ಆ ನಿಟ್ಟಿನಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಯುವ ಮುಖಂಡ ಸಿ.ಎ.ಚನ್ನಪ್ಪ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾಯಾಂರ್ಗ, ನ್ಯಾಯಾಂಗಮತ್ತು ಮಾಧ್ಯಮ ರಂಗ ಸ್ತಂಭಗಳಾಗಿದ್ದು, ಸಂವಿಧಾನ ಆಶಯಗಳನ್ನು ಸಂರಕ್ಷಿಸುವಲ್ಲಿ ತಮ್ಮದೇ ಆದ ಪಾತ್ರ ವಹಿಸುತ್ತವೆ ಎಂದರು. ಇದೇ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪೀಠಿಕೆಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಪುಷ್ಪ ನಮನ ಸಲ್ಲಿಸಲಾಯಿತು. ಸಂವಿಧಾನ ಪೀಠಿಕೆ ಬೋಧಿಸಿದರು. ಈ ಸಂದರ್ಭದಲ್ಲಿ ಗ್ರೇಡ್-1 ತಹಶೀಲ್ದಾರ್ ಷಣ್ಮುಕಪ್ಪ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಶಿರಸ್ತೇದಾರ ರಮೇಶ, ವಿಎ ಲಕ್ಷ್ಮಣ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು. ನ.02: ಸ್ಥಳೀಯ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.