‘ಎಲ್ಲರಿಗೂ ನ್ಯಾಯ ಮತ್ತು ಸಮಾನತೆ ದೊರಕಿಸುವಲ್ಲಿ ಅಂಬೇಡ್ಕರ ಅವರ ಪಾತ್ರ ಅನನ್ಯ’
Ambedkar's role in providing justice and equality for all is unique'
ವಿಜಯಪುರ 06: ಸಂವಿಧಾನ ರಚಿಸುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯು ಭದ್ರಗೊಳಿಸಿದವರು ಅಂಬೇಡ್ಕರ ಅವರು. ಸಮಾಜದಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಎಲ್ಲರೂ ಸಮಾನರು ಹಾಗೂ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಅವಕಾಶಗಳನ್ನು ಒದಗಿಸಿಕೊಡುವಲ್ಲಿ ಅಂಬೇಡ್ಕರ ಅವರ ಪಾತ್ರ ಅನನ್ಯವಾದುದು ಎಂದು ಪ್ರಾಂಶುಪಾಲ ಡಾ. ಎ.ಐ.ಹಂಜಗಿ ಅವರು ಅವರು ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿಯಲ್ಲಿ “ಡಾ.ಬಿ.ಆರ್.ಅಂಬೇಡ್ಕರ ಮಹಾ ಪರಿನಿರ್ವಾಣ ದಿನ” ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರೆಲ್ಲರೂ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯದರ್ಶಿ ಡಾ. ಚಂದ್ರಕಾಂತ.ಬಿ, ಡಾ. ಚಿದಾನಂದ ಆನೂರ, ಡಾ. ರಾಜಶ್ರೀ ಮಾರನೂರ, ಪ್ರೊ. ಎಂ.ಎಸ್.ಖೊದ್ನಾಪೂರ, ಡಾ. ವಿಶಾಲಾಕ್ಷೀ ಹೊನ್ನಾಕಟ್ಟಿ, ಪ್ರೊ. ಎಸ್.ಡಿ.ತೋಂಟಾಪೂರ, ಡಾ. ಶಿವಾನಂದ ಜಮಾದಾರ, ಡಾ. ಮಮತಾ ಬನ್ನೂರ, ಡಾ. ದೇವೇಂದ್ರಗೌಡ, ಡಾ. ಪ್ರಕಾಶ ಹಾವೇರಿ ಪೇಠ, ಪ್ರೊ. ಸುನೀಲ ಹತ್ತಿ, ಅಧೀಕ್ಷಕಿ ಸರ್ವಶ್ರೀ ಚಟ್ಟೇರ, ಮಲ್ಲು ಗೋಠೆ, ಸಂಗಮೇಶ ಕುರಪಿ ಇನ್ನಿತರರು ಸಹ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 