ಎಲ್ಲರಿಗೂ ಸಾಮಾಜಿಕ ನ್ಯಾಯ ಮತ್ತು ಸಮಾನತೆ ದೊರಕಿಸುವಲ್ಲಿ ಅಂಬೇಡ್ಕರ ಅವರ ಪಾತ್ರ ಅನನ್ಯವಾದುದು: ಬಿ.ಆರ್.ಬನಸೋಡೆ
Ambedkar's role in providing social justice and equality for all is unique: B.R. Banasode
ವಿಜಯಪುರ 17: ಡಾ. ಬಿ.ಆರ್.ಅಂಬೇಡ್ಕರ ಅವರು ಸಂವಿಧಾನ ಶಿಲ್ಪಿ, ಸಾಮಾಜಿಕ ಸುಧಾರಕ ಮತ್ತು ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದರು. ಸಂವಿಧಾನ ರಚಿಸುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯು ಭದ್ರಗೊಳಿಸಿದವರು. ಸಮಾಜದಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಎಲ್ಲರೂ ಸಮಾನರು ಹಾಗೂ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಅವಕಾಶಗಳನ್ನು ಒದಗಿಸಿಕೊಡುವಲ್ಲಿ ಅಂಬೇಡ್ಕರ ಅವರ ಪಾತ್ರ ಅನನ್ಯವಾದುದು ಎಂದು ಸಹಕಾರ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಶ್ರೀ ಬಿ.ಆರ್.ಬನಸೋಡೆ ಅವರು ಅವರು ಅಭಿಪ್ರಾಯಪಟ್ಟರು. ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗದಡಿಯಲ್ಲಿ “ಡಾ. ಬಿ.ಆರ್.ಅಂಬೇಡ್ಕರ ಅವರ ಜಯಂತಿ” ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ರಾಷ್ಟ್ರದಲ್ಲಿನ ಅಸ್ಪೃಶ್ಯತೆ ನಿರ್ಮೂಲನೆ, ಸಮಾನತೆ, ಮಹಿಳಾ ಹಕ್ಕುಗಳು, ಕಾರ್ಮಿಕ ಕಲ್ಯಾಣ ಮತ್ತು ರಿಝರ್ವ ಬ್ಯಾಂಕ ಸ್ಫಾಪನೆಯಲ್ಲಿ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಶಿಕ್ಷಣವು ಸಿಂಹದ ಹಾಲು ಇದ್ದಂತೆ. ಅದನ್ನು ಕುಡಿದವರು ಘರ್ಜಿಸುತ್ತಾರೆ” ಎಂದು ಹೇಳುತ್ತಾ, ಶೋಷಿತ ಮತ್ತು ದಮನಿತ ವರ್ಗದವರು ಶಿಕ್ಷಣ, ಸ್ವಾತಂತ್ರ್ಯ ಮತ್ತು ಸಮಾನತೆ ಹಕ್ಕುಗಳನ್ನು ಪಡೆಯುವಲ್ಲಿ ಆಶಾಕಿರಣವಾಗಿದ್ದರು. ಅಂಬೇಡ್ಕರ ಅವರ ಜಯಂತಿ ಕೇವಲ ಪೂಜೆಗೆ ಮಾತ್ರ ಸೀಮಿತವಾಗಬಾರದು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಒಂದು ಎಂಬ ಸದ್ಭಾವದೊಂದಿಗೆ ಸಮ ಸಮಾಜದ ಕನಸನ್ನು ನನಸು ಮಾಡಬೇಕು ಮತ್ತು ಅವರ ಜೀವನ, ತತ್ವ-ಸಿದ್ದಾಂತ ಮತ್ತು ಮೌಲ್ವಿಕ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ ಈ ಆಚರಣೆಯು ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡ. ಎ.ಐ.ಹಂಜಗಿ ಅವರು ಮಾತನಾಡಿ, ದೇಶದಲ್ಲಿ ಜಾತಿ ತಾರತಮ್ಮದ ವಿರುದ್ಧ ಪ್ರಬಲ ಹೋರಾಟ ಮಾಡಿದ ಅಂಬೇಡ್ಕರ ಅವರು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ಸ್ಥಾಪನೆಯಲ್ಲಿ ಶ್ರಮಿಸಿದ ಅವರು ವಿಶ್ವದ ಅತಿ ದೊಡ್ಡದಾದ ಲಿಖಿತ ಸಂವಿಧಾನವನ್ನು ರೂಪಿಸಿದ್ದಾರೆ ಎಂದು ಹೇಳಿದರು.ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ. ಚಂದ್ರಕಾಂತ.ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗದ ಸಂಚಾಲಕ ಡಾ. ಪ್ರಕಾಶ ಹಾವೇರಿಪೇಠ ಮತ್ತು ಜಂಟಿ ನಿರ್ದೇಶಕರ ಕಛೇರಿ ಅಧೀಕ್ಷಕ ಶ್ರೀ ರೇವಣಸಿದ್ದ ಶಿರನಾಳ ಇವರು ವೇದಿಕೆಯ ಮೇಲಿದ್ದರು.
ಅಂಬೇಡ್ಕರ ಜಯಂತಿ ಅಂಗವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ ಅವರ ಜೀವನ, ಸಾಧನೆ ಮತ್ತು ಕೊಡುಗೆಗಳ ಕುರಿತು ಕ್ವೀಝ್ ಮತ್ತು ಅಂಬೇಡ್ಕರ ಮತ್ತು ಮಹಿಳೆ ವಿಷಯಕ ಕುರಿತು ಏರಿ್ಡದ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಸಂಗಮೇಶ ಗುರವ ನಿರೂಪಿಸಿದರು. ಶ್ರೀ ಯು.ಬಿ.ಮುಜಾವರ ಅತಿಥಿಗಳ ಪರಿಚಯಿಸಿದರು. ಡಾ. ಚಂದ್ರಕಾಂತ. ಬಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 