ಬಳ್ಳಾರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ, ಏ.14: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ನಗರದ ಮೊದಲ ರೈಲ್ವೆ ಗೇಟ್ ಬಳಿಯ ಅಂಬೇಡ್ಕರ್ ಭವನದ ಹತ್ತಿರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಆಚರಿಸಲಾಯಿತು.

        ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ಶಾಸಕರಾದ ಸೋಮಶೇಖರ್ ರೆಡ್ಡಿ, ನಾಗೇಂದ್ರ, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್ ಅವರು ಅಂಬೇಡ್ಕರ್ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಕುಲ್ ಅವರು ಕೋವಿಡ್-19 ಹಿನ್ನೆಲೆ ಈ ಬಾರಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಈ ದೇಶಕ್ಕೆ ನೀಡಿದ ಕೊಡುಗೆ ಗಮನಾರ್ಹ. ಅವರ ವಿಚಾರಧಾರೆಗಳು ಸದಾ ಕಾಲಕ್ಕೂ ಪ್ರಸ್ತುತ ಎಂದರು.

ಅವರ ವಿಚಾರ ಧಾರೆಗಳು ಮತ್ತು ಆದರ್ಶಗಳನ್ನು ಇಂದು ಎಲ್ಲರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್  ಮಾಡುವುದರ ಮೂಲಕ ಪ್ರಚುರಪಡಿಸುವ ಕೆಲಸ ಮಾಡಬೇಕು ಎಂದರು.

ಜಿಪಂ ಸದಸ್ಯರಾದ ಎ.ಮಾನಯ್ಯ,ಮುಂಡ್ರಗಿ ನಾಗರಾಜ, ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ,ಸಮಾಜಕಲ್ಯಾಣ ಇಲಾಖೆಯ ಉಪನಿದರ್ೇಶಕ ರಾಜಪ್ಪ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿದರ್ೇಶಕ ರಾಮೇಶ್ವರಪ್ಪ,ತಹಸೀಲ್ದಾರ್ ವಿಶ್ವಜೀತ್ ಮೆಹತಾ, ವಾತರ್ಾ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ, ಬಿಸಿಎಂ ಅಧಿಕಾರಿ ಸಕೀನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶುಭಾ, ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಇದ್ದರು.