ವಿಜೃಂಭಣೆಯಿಂದ ನಡೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
Ambedkar portrait procession held with great enthusiasm
ವಿಜೃಂಭಣೆಯಿಂದ ನಡೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ಕಂಪ್ಲಿ 15: ತಾಲೂಕು ಸಮೀಪದ ದೇವಸಮುದ್ರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಮುಖಂಡ ಹೆಚ್.ಗುಂಡಪ್ಪ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್‌ಅವರ ತತ್ವ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ.ಬಿ.ಆರ್. ಅಂಬೇಡ್ಕರ್‌ಅವರು ಶೋಷಣೆಯನ್ನು ಸಹಿಸಿ, ಸಮಾಜ ಪರಿವರ್ತನೆಗಾಗಿ ಜೀವನದ ಉದ್ದಕ್ಕೂ ಹೋರಾಟದ ಬದುಕು ನಡೆಸಿ ಶೋಷಿತ ಸಮಾಜಗಳಿಗೆ ಬೆಳಕಿನ ಹಣತೆಯಾಗಿದ್ದಾರೆ. ನಾವೆಲ್ಲರೂ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದರು. ದೇವಸಮುದ್ರ ಗ್ರಾಮದಲ್ಲಿ ಕೆಂಚಮ್ಮ ಗುಡಿಯಿಂದ ಸಹಿಪ್ರಾ ಶಾಲೆತನಕ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು. ಯುವತಿಯರು ಆರತಿ ತಟ್ಟೆಗಳನ್ನು ಹಿಡಿದು ಪಾಲ್ಗೊಂಡಿದ್ದರು.
ಪ್ರಮುಖರಾದ ಕಡೆಮನಿ ಮಂಜುನಾಥ, ಎನ್.ಹೊನ್ನೂರ್ಪ, ಕುರುಬರ ಬಸವರಾಜ, ನಾಯಕರ ವೆಂಕೋಬಿ, ಎಚ್.ವೀರೇಶ, ಗ್ರಾಮ ಸಂಚಾಲಕ ಎಚ್.ರುದ್ರ್ಪ, ಎಚ್.ದುರ್ಗೇಶ, ಬಾಳಾಪುರ ಮಂಜುನಾಥ, ಎಚ್.ಪ್ರಭು ಇತರರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 