ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಅಂಬಿಗರ ಚೌಡಯ್ಯನವರು
Ambigara Choudaiah, who worked for social reform through his vachanas
ಗದಗ 21: ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದವರು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್.ಅವರು ಮಾತನಾಡಿ ಅಂಬಿಗರ ಚೌಡಯ್ಯನವರು ನೇರ ನಿಷ್ಟುರವಾದಿಗಳಾಗಿದ್ದರು. ಡೋಣಿ ನಡೆಸುವ ಕಾಯಕ ಇವರದಾಗಿತ್ತು. ಕಾಯಕ ನಿಷ್ಟೆಗೆ ಹೆಸರಾದ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ತಾರತಮ್ಯ ಹೋಗಲಾಡಿಸಿ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು ಎಂದ ಅಪರ ಜಿಲ್ಲಾಧಿಕಾರಿಗಳು ಸಮಾಜ ಸುಧಾರಣೆಯಾಗಬೇಕಾದರೆ ಶಿಕ್ಷಣವೊಂದೇ ಮಾರ್ಗವಾಗಿದೆ. ಆದಕಾರಣ ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.
ನರೇಗಲ್ ದ ಉಪನ್ಯಾಸಕ ಶಿವಾನಂದ ಗೋಗೇರಿ ಅವರು ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಡಿವೈಎಸ್‌ಪಿ ವಿದ್ಯಾಧರ ನಾಯಕ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಜೆ.ಬಿ.ಗಾರವಾಡ, ಉಪಾಧ್ಯಕ್ಷ ಸಿ.ಪಿ.ಬಾರಕೇರ, ತಾಲೂಕಾಧ್ಯಕ್ಷ ಡಾ.ಗಣೇಶ ಸುಲ್ತಾನಪುರ, ಪ್ರಮುಖರಾದ ಯಶೋಧಾ ಜಾಲಗಾರ, ಶಕುಂತಲಾ ಜಕನೂರ, ಪ್ರೇಮಾ ಮನಗೂಳಿ, ಕೀರ್ತಿ ಜಕನೂರ, ಪ್ರಕಾಶ ಪೂಜಾರ, ಕೆ.ಎನ್.ಸುಣಗಾರ, ಮಂಜುನಾಥ ಸುಣಗಾರ, ಸುಭಾಸ ಕದಡಿ, ಮಾಲತೇಶ ಬಾರ್ಕಿ, ಮಾರುತಿ ಕೌದಿ, ಚಂದ್ರಶೇಖರ ಅಂಬಿಗೇರ, ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಪ್ರಮುಖರು, ಗಣ್ಯರು, ಹಿರಿಯರು ಹಾಜರಿದ್ದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 