ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಕೃತ್ಯ ಖಂಡನೀಯ: ರೊಟ್ಟಿ
Ambigara Chowdary's statue vandalism is condemnable: Rotty
ಲೋಕದರ್ಶನ ವರದಿ
ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ ಕೃತ್ಯ ಖಂಡನೀಯ: ರೊಟ್ಟಿ
ಬೆಳಗಾವಿ 11 ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿರುವ ಕೃತ್ಯವು ಖಂಡನೀಯವಾಗಿದ್ದು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಾಗತಿಕ ಲಿಂಗಾಯತ ಮಹಾಸಭೆಯ ಸಂಘಟನಾ ಕಾರ್ಯದರ್ಶಿ ಬಸವರಾಜ ರೊಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲ್ಬುರ್ಗಿ ಜಿಲ್ಲೆಯ ಶಹಪುರ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ, ಗುರುವಾರ ರಾತ್ರಿ, 12ನೇ ಶತಮಾನದ ಶ್ರೇಷ್ಠ ಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು, ಕೆಲ ಸಮಾಜಘಾತಕ ಕಿಟಗೇಡಿಗಳು ಭಗ್ನಗೊಳಿಸಿರುವ ಘಟನೆ ಅತ್ಯಂತ ಆಘಾತಕಾರಿ ಸಂಗತಿಯಾಗಿದೆ. ಬಸವಾದಿ ಶರಣರೊಂದಿಗೆ, ಸಮಾನತೆಯ ಸಂದೇಶವನ್ನು ಸಾರಿದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯ ಎಡಗೈಯನ್ನು ಮುರಿದು ಹಾಕಿ, ಬಲಗೈ ಬೆರಳುಗಳನ್ನು ವಿರೂಪಗೊಳಿಸಿ, ಶರಣ ಅಂಬಿಗರ ಚೌಡಯ್ಯನವರ ಮುಖಕ್ಕೆ ಸಗಣಿಯನ್ನು ಎರಚಿದ್ದು ಅತ್ಯಂತ ಅಮಾನವೀಯ, ಹೇಯ ಕೃತ್ಯವಾಗಿದೆ. ಇದು ಅಸಹಿಷ್ಣುತೆಯ ಒಂದು ನಿದರ್ಶನ. ಈ ಕೃತ್ಯವನ್ನು ನಾವು ಖಂಡಿಸುತ್ತೇವೆ ಎಂದವರು ಹೇಳಿದ್ದಾರೆ.
ಸರಕಾರ ಸಮಾಜಘಾತಕ ಕಿಡಿಗೇಡಿಗಳನ್ನು ಪತ್ತೆ, ಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 