ಮಂಗಳೂರು, ಜ 30 : ಆಂಬ್ಯುಲೆನ್ಸ್ ನಿಂದ ಅಪಘಾತಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಸ್ಕೂಟರ್ ಗೆ ಆಂಬುಲೆನ್ಸ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರಿಮಾಡುತ್ತಿರುವ ,ಮಹಿಳೆ ಮೃತಪಟ್ಟ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ಗುರುವಾರದಂದು ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದ್ದು,
ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.