ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು- ಸಿದ್ದರಾಮಯ್ಯ
ಬೆಂಗಳೂರು, ಮೇ 18, ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರ ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ನಿರ್ಧರಿಸಿದಂತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತುಕತೆ ನಡೆಸಬೇಕು. ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ ಎಂದು ಹೇಳಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 