ಅಮೀರ್ ಹಮ್ಜಾ ನದಾಫ್ ಗೆ ಡಾ, ರಾಧಾಕೃಷ್ಣನ್ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ
Amir Hamza Nadaf to be conferred with Dr. Radhakrishnan International Award
ಅಮೀರ್ ಹಮ್ಜಾ ನದಾಫ್ ಗೆ ಡಾ, ರಾಧಾಕೃಷ್ಣನ್ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಧಾನ
ಕೊಪ್ಪಳ 19: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವೃತ್ತಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಅಮೀರ್ ಹಮ್ಜಾ ಎ.ನದಾಫ್ ರವರ ಉತ್ತಮ ವೃತ್ತಿ ಶಿಕ್ಷಣ ಮತ್ತು ಸಮಾಜ ಸೇವೆ ಗಾಗಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ಟ್ರಸ್ಟ್ ಬೆಂಗಳೂರು ವತಿಯಿಂದ ಕೊಡ ಮಾಡಿದ ಪ್ರತಿಷ್ಠಿತ ಡಾ, ರಾಧಾಕೃಷ್ಣನ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಇದೆ ತಿಂಗಳ ಕಳೆದ ದಿ, 16 ರಂದು ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರ ಉತ್ತಮ ಸೇವೆಗಾಗಿ ಪ್ರಶಸ್ತಿ ಪ್ರಧಾನ ಮಾಡಿ ಸತ್ಕರಿಸಲಾಯಿತು, ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆಯವರು ಸಮಾರಂಭದಲ್ಲಿ ಪಾಲ್ಗೊಂಡು ಅಮೀರ್ ಹಮ್ಜಾ ನದಾಫ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸತ್ಕರಿಸಿದರು, ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಶ್ರೀ ಮೊಟಗಿ ಮಠ ದ ಶ್ರೀ ಪ್ರಭು ಚನ್ನಬಸವ ಮಹಾಸ್ವಾಮಿಗಳು ಉಡುಪಿ ಜಿಲ್ಲೆ ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ರಮಾನಂದ ಗುರೂಜಿ ಕರ್ನಾಟಕ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್ .ಜಿ. ನಂದಯ್ಯನಮಠ ಪಾಲ್ಗೊಂಡಿದ್ದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಸಿ ಸೋಮಶೇಖರ್ ರವರು ಸಮ್ಮೇಳನ ಅಧ್ಯಕ್ಷರಾಗಿ ಪಾಲ್ಗೊಂಡಿದ್ದು ಸವಿತಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ, ಎಂ. ಎಸ್. ಮುತ್ತುರಾಜ್ ಮತ್ತು ಮಕ್ಕಳ ಸಾಹಿತಿ ಗದುಗಿನ ಡಾ, ರಾಜೇಂದ್ರ ಗಡಾದ್ ಸೇರಿದಂತೆ ಕಾರ್ಯಕ್ರಮ ಸಂಘಟಕರಾದ ರಮೇಶ್ ಸುರ್ವೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವು ಗಣ್ಯರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರಧಾನ ಮಾಡಿ ಸತ್ಕರಿಸಲಾಯಿತು, ಕೊಪ್ಪಳದ ಅಮೀರ್ ಹಮ್ಜಾ ನದಾಫ್ ರವರು ತಮ್ಮ ಉತ್ತಮ ಸಮಾಜ ಸೇವಾ ಕಾರ್ಯ ಮತ್ತು ಉತ್ತಮ ಸೇವೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವುದು ಹಾಗೂ ಈ ಬಾರಿ ಅಂತರಾಷ್ಟ್ರೀಯ ಮಟ್ಟದ ಡಾ, ರಾಧಾಕೃಷ್ಣನ್ ಪ್ರಶಸ್ತಿಯನ್ನು ಅವರಿಗೆ ಲಭಿಸಿರುವುದಕ್ಕೆ ಕೊಪ್ಪಳ ಜಿಲ್ಲೆಯ ವಿವಿಧ ಸಂಘಟನೆ ಹಾಗೂ ಕರ್ನಾಟಕ ರಾಜ್ಯ ನದಾಫ್ ಪಿಂಜಾರ್ ಸಂಘದ ಹಲವು ಜನ ಪದಾಧಿಕಾರಿಗಳು ವಿಶೇಷವಾಗಿ ನದಾಫ ರವರ ಶಿಷ್ಯಂದರ ಬಳಗ ಹಾಗೂ ಉಪ ಪ್ರಚಾರ್ಯ ಎಂ.ಎ. ಖೈಯುಮ್ ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 