ಅಮೀರ್ ಹಮ್ಜಾ ಅವರಿಗೆ ಕುವೆಂಪು ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
Amir Hamza presented with Kuvempu Sadbhavana National Award
ಕೊಪ್ಪಳ 28: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವೃತ್ತಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಕಳೆದ ವರ್ಷ ನಿವೃತ್ತಿಗೊಂಡ ಅಮೀರ್ ಹಮ್ಜಾ ,ಏ, ನದಾಫ್ ರವರಿಗೆ ವಿಶ್ವ ಮಾನವ ಕುವೆಂಪು ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡ ಲಾಗಿದ್ದು ಅವರನ್ನು ರವಿವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಲಿರುವ ಸರ್ವ ಜನಾಂಗದ ಶಾಂತಿಯ ತೋಟ ಕಾರ್ಯಕ್ರಮದ ಅಡಿಯಲ್ಲಿ ನೃತ್ಯ ಪರ್ವ ಸಮಾರಂಭದಲ್ಲಿ ದರ್ಶನ್ ಸೋಶಿಯಲ್ ಮತ್ತು ಕಲ್ಚರಲ್ ಅಕಾಡೆಮಿ ಬೆಂಗಳೂರು ವತಿಯಿಂದ ಪ್ರಶಸ್ತಿಯನ್ನು ಪ್ರಧಾನ ಮಾಡಿ ಸನ್ಮಾನಿಸಿ ಸತ್ಕರಿಸಲಾಯಿತ.
ಸದರಿಯವರ ವೃತ್ತಿ ಶಿಕ್ಷಣದ ಉತ್ತಮ ಸೇವೆಗಾಗಿ ಹಾಗೂ ಸಮಾಜದಲ್ಲಿ ಉತ್ತಮ ಜನಪ್ರಿಯ ಶಿಕ್ಷಕನೆಂದು ಕರೆಯಲ್ಪಡುವ ಅಮೀರ್ ಹಮ್ಜಾ, ಏ. ನದಾಫ್ ರವರಿಗೆ ಈ ಪ್ರಶಸ್ತಿ ಲಭಿಸಿರುವದು ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ,ಈ ಹಿಂದೆ ಯು ಸಹ ಅವರಿಗೆ ಹಲವು ಪ್ರಶಸ್ತಿ ಲಭಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ , ಕೊಪ್ಪಳದ ಅವರ ಸ್ನೇಹಿತರ ಬಳಗ ಮತ್ತು ಶಿಷ್ಯಂದರ ಬಳಗ ದಲ್ಲಿ ಹರ್ಷದ ವಾತಾವರಣ ನಿರ್ಮಾಣ ಗೊಂಡಿದೆ, ಸದರಿ ಮಹತ್ವದ ವಿಶ್ವಮಾನವ ಕುವೆಂಪು ಸದ್ಭಾವನಾ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಅವರಿಗೆ ಲಭಿಸಿರುವುದು ಸಂತಸ ಉಂಟು ಮಾಡಿದೆ ಪ್ರಶಸ್ತಿ ಸ್ವೀಕರಿಸುವುದಕ್ಕೆ ಕೊಪ್ಪಳದಲ್ಲಿ ಅವರ ಅಭಿಮಾನಿ ಬಳಗ ಸಂಭ್ರಮಿಸಿ ಅವರಿಗೆ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟಕರು ಕಾರ್ಯಕ್ರಮ ಆಯೋಜಕರು ಮತ್ತು ಅತಿಥಿ ಗಣ್ಯರು ಸಾಹಿತಿಗಳು ಹೋರಾಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಇದೇ ವೇಳೆ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 