ನವದೆಹಲಿ, ಅ 2: ಮಹಾತ್ಮಾ ಗಾಂಧಿ ಅವರ 150 ನೇ ಜನ್ಮ ವಷರ್ಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ದೇಶವ್ಯಾಪಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ನವದೆಹಲಿಯ ಶಾಲಿಮರ್ ಬಾಗ್ ನಲ್ಲಿ ಬುಧವಾರ ಬೆಳಗ್ಗೆ ಈ ದೇಶವ್ಯಾಪಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಾಂಧಿ ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು ಎಂದು ಸ್ಮರಿಸಿದರು.
ಏಕಬಳಕೆಯ ಪ್ಲಾಸ್ಟಿಕ್ ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಮಾರಕವಾಗಿರುವ ಹಿನ್ನೆಲೆಯಲ್ಲಿ ಇಂತಹ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಪಣತೊಡುವಂತೆ ಜನರಿಗೆ ಮನವಿ ಮಾಡಿದರು. ಈ ಅಭಿಯಾನದ ಭಾಗವಾಗಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಅ 2 ರಿಂದ ಅ 31 ರವರೆಗೆ ಪ್ರತಿ ದಿನ 5 ಕಿಲೋಮೀಟರ್ ನಂತೆ 150 ಕಿಲೋಮೀಟರ್ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಿದ್ದಾರೆ. ಗಾಂಧಿ ಜಯಂತಿ ದಿನದಿಂದ ಸದರ್ಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದವರೆಗೆ ಈ ಪಾದಯಾತ್ರೆ ಕೈಗೊಂಡು ಇಬ್ಬರು ಧೀಮಂತ ನಾಯಕರಿಗೆ ಗೌರವ ಸೂಚಿಸಲಿದ್ದಾರೆ. ಅವರ ಸ್ವದೇಶ, ಸ್ವಧರ್ಮ, ಸ್ವದೇಶಿ ಮೌಲ್ಯಗಳನ್ನು ಹಳ್ಳಿ ಹಳ್ಳಿಗೂ ಪಸರಿಸುವುದು ಈ ಆಂದೋಲನದ ಧ್ಯೇಯವಾಗಿದೆ.