ಶಾದಿ ಮಹಲ್‌ಕಟ್ಟಡ ಅಭಿವೃದ್ಧಿ ಪರೀಶೀಲನೆ ನಡೆಸಿದ ಅಮ್ಜದ್ ಪಟೇಲ್
Amjad Patel conducted development inspection of Shadi Mahal building
ಕೊಪ್ಪಳ 27: ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಜಾಮಿಯಾ ಮಸೀದಿ ಕಮಿಟಿ ಹಾಗೂ ಶಾದಿ ಮಹಲ್ ಕಮಿಟಿಯ ಪದಾಧಿಕಾರಿಗಳೊಂದಿಗೆ ಶಾದಿ ಮಹಲ್‌ಕಟ್ಟಡ ನಿರ್ಮಾಣ ಅಭಿವೃದ್ಧಿ ಮತ್ತು ಸ್ಥಳ ಪರೀಶೀಲನೆ ಇತ್ಯಾದಿ ಕಾರ್ಯ ಗಳ ಬಗ್ಗೆ ಕೊಪ್ಪಳ ನಗರಸಭೆಯಅಧ್ಯಕ್ಷ ಅಮ್ಜದ್ ಪಟೇಲ್ ರವರು ರವಿವಾರ ಬಂದು ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು.
ಇದೆ ವೇಳೆ ಕಮಿಟಿ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮತ್ತು ಹಜ್ ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಖಾನ್‌ರವರ ಬಳಿ ಮನವರಿಕೆ ಮಾಡಿ ನಮ್ಮ ಸಂಸದ ಕೆ ರಾಜಶೇಖರ ಹಿಟ್ನಾಳಮತ್ತು ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ರವರ ಸೂಚನೆಯಂತೆ ಸದರಿ ಮುನಿರಾಬಾದಿನ ಶಾದಿ ಮಹಲ್‌ಕಟ್ಟಡಕಾಮಗಾರಿಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಿ ಸಾರ್ವಜನಿಕರ ಉಪಯೋಗಕ್ಕೆ ಆಗುವಂತೆ ಕೂಡಲೇ ಅಗತ್ಯಕ್ರಮ ಕೈಗೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಿ ಸಚಿವರ ಗಮನಕ್ಕೆ ತಂದು ಅವರಿಗೆ ಮನವರಿಕೆ ಮಾಡಿ ಶಾಸಕರ ಮೂಲಕ ಹೆಚ್ಚಿನ ಅನುದಾನ ಒದಗಿಸಿ ಕೊಡುವ ಭರವಸೆಯನ್ನುಇದೆ ವೇಳೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮುನಿರಾಬಾದಿನ ಜಾಮಿಯಾ ಮಸೀದಿ ಕಮಿಟಿ ಹಾಗೂ ಶಾದಿ ಮಹಲ್ ಕಮಿಟಿಯ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾದಿ ಮಹಲ್ ಕಮಿಟಿ ಅಧ್ಯಕ್ಷರಾದ ಸಾಧಿಕ್ ಪಾಷಾ ಜಾಮಿಯ ಮಸೀದಿ ಕಮಿಟಿ ಅಧ್ಯಕ್ಷರಾದ ಶೇರ್‌ಖಾನ್ ಸೇರಿದಂತೆ ಖಾಜಾಪಾಷ ಮಾಜಿ ಅಲ್ಲದೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 