ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವ

ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವ Amminabawi Panchagriha Hiremath's fair festival

ಧಾರವಾಡ  07: ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕರ್ತೃ ಶ್ರೀಗುರುಶಾಂತಲಿ0ಗ ಶಿವಯೋಗಿಗಳ ವಾರ್ಷಿಕ ಜಾತ್ರಾ ಮಹೋತ್ಸವ ಮಾ.23 ರಂದು ಜರುಗಲಿದೆ. ಜಾತ್ರೆಯ ಅಂಗವಾಗಿ ಮಾ. 8 ರಿಂದ 22ರವರೆಗೆ ಸವದತ್ತಿ ಮೂಲಿಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪ್ರವಚನ ನೀಡಲಿದ್ದು, ಮಾ.8 ರಂದು ಸಂಜೆ 6.30ಕ್ಕೆ ಜಮಖಂಡಿ ಶಾಸಕ ಜಗದೀಶ ಗುಡಗುಂಟಿಮಠ ಪುರಾಣ ಪ್ರವಚನ ಉದ್ಘಾಟಿಸುವರು. ಹಾವೇರಿ ಜಿಲ್ಲೆ ನೆಗಳೂರಿನ ಶ್ರೀಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬಳ್ಳಾರಿ ಕಲ್ಯಾಣಮಠದ ಶ್ರೀಕಲ್ಯಾಣ ಸ್ವಾಮೀಜಿ ಉಪದೇಶಾಮೃತ ನೀಡುವರು.

ಧರ್ಮ ಜಾಗೃತಿ ಸಮಾವೇಶ : ಮಾ.20 ರಂದು ಸಂಜೆ 6.30 ಗಂಟೆಗೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನಡೆಯುವ ಧರ್ಮ ಜಾಗೃತಿ ಸಮಾವೇಶವನ್ನು ಮಾಜಿ ಶಾಸಕ ಅಮೃತ ದೇಸಾಯಿ ಉದ್ಘಾಟಿಸುವರು. ಸುಳ್ಳದ ಶ್ರೀಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿರಕೋಳದ ಶ್ರೀಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಇನಾಂಹೊ0ಗಲದ ಶ್ರೀಅಭಿನವ ಸಿದ್ಧಲಿಂಗ ಸ್ವಾಮೀಜಿ, ಚಿಕ್ಕಮಗಳೂರು ಜಿಲ್ಲೆ ಬೇರುಗಂಡಿಯ ಶ್ರೀರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಮೊರಬದ ಶ್ರೀಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಸತ್ತಿಗೇರಿಯ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳುವರು.

ಮಾಜಿ ಶಾಸಕಿ ಸೀಮಾ ಮಸೂತಿ, ಉದ್ಯಮಿ ಮಂಜುನಾಥ ಮಕ್ಕಳಗೇರಿ, ಮಾಜಿ ಮೇಯರ್ ಈರೇಶ ಅಂಚಟಗೇರಿ, ಹು.ಧಾ.ಮ.ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಜಿ.ಪಂ. ಮಾಜಿ ಉಪಾಧ್ಯಕ್ಷ ನಿಜನಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು.ಧರ್ಮ ಸಂಗಮ ಸಮಾವೇಶ : ಮಾ.22 ರಂದು ಸಂಜೆ 6.30ಗಂಟೆಗೆ ತಿಪಟೂರು ತಾಲೂಕು ನೊಣವಿನಕೆರೆ ಸೋಮೇಕಟ್ಟೆ ಕಾಡಸಿದ್ಧೇಶ್ವರಮಠದ ಶ್ರೀಅಭಿನವ ಕಾಡಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಧರ್ಮ ಸಂಗಮ ಸಮಾವೇಶವನ್ನು ಶಾಸಕ ವಿನಯ ಕುಲಕರ್ಣಿ ಉದ್ಘಾಟಿಸುವರು. ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆವಹಿಸಲಿದ್ದು, ವಿಜಯನಗರ ಜಿಲ್ಲೆ ಹಂಪಸಾಗರದ ಶ್ರೀಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕಲಬುರ್ಗಿ ಜಿಲ್ಲೆ ಬೆಳಗುಂಪಾದ ಅಭಿನವ ಪರ್ವತೇಶ್ವರ ಶಿವಾಚಾರ್ಯ ಸ್ವಾಮೀಜಿ, ಹುಡುಗಿ ಗ್ರಾಮದ ಶ್ರೀಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಳೇಹುಬ್ಬಳ್ಳಿಯ ಶ್ರೀರೇಣುಕಪ್ರಸಾದ ದೇವರು, ಹುಣಸಿಕಟ್ಟಿಯ ಶ್ರೀಬಸವರಾಜ ದೇವರು ಪಾಲ್ಗೊಳ್ಳುವರು.  

ನಗರ ನೀರು ಸರಬರಾಜು-ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ಕಾಂಗ್ರೆಸ್ ಮುಖಂಡರುಗಳಾದ ತವನಪ್ಪ ಅಷ್ಟಗಿ, ಅರವಿಂದ ಏಗನಗೌಡರ, ಈಶ್ವರ ಶಿವಳ್ಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ಮುಖ್ಯ ಅತಿಥಿಗಳಾಗಿ ಆಗಮಿಸುವರು.ಗುಗ್ಗಳ ಮಹೋತ್ಸವ : ಜಾತ್ರೆಯ ಅಂಗವಾಗಿ ಮಾ.22ರಂದು ಪ್ರಾತಃಕಾಲದಲ್ಲಿ ಶ್ರೀವೀರಭದ್ರದೇವರ ಸಾಮೂಹಿಕ ಗುಗ್ಗಳ ಮಹೋತ್ಸವ ನಡೆಯಲಿದೆ. ನಿತ್ಯದ ಕಾರ್ಯಕ್ರಮಗಳಲ್ಲಿ ಅಮ್ಮಿನಬಾವಿ ಶ್ರೀಸಂಸ್ಥಾನ ಪಂಚಗೃಹ ಹಿರೇಮಠದ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಅಭಿನವ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಳ್ಳುವರು. 15 ದಿನಗಳ ಕಾಲ ಗದಗ ಶ್ರೀವೀರೇಶ್ವರ ಪುಣ್ಯಾಶ್ರಮದ ವೀರೇಶಕುಮಾರ ಮಳಲಿ ಅವರ ನಿತ್ಯದ ಸಂಗೀತ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಕೆರಕನಹಳ್ಳಿ ತಬಲಾ ಸಾಥ ನೀಡುವರು.

ರಥೋತ್ಸವ : ಮಾ.23 ರಂದು ಸಂಜೆ 5 ಗಂಟೆಗೆ ಶ್ರೀಗುರುಶಾಂತಲಿ0ಗ ಶಿವಯೋಗಿಗಳ ರಥೋತ್ಸವ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಮಠಾಧೀಶರು ಪಾಲ್ಗೊಳ್ಳುವರು. ಇದೇ ದಿನ ಪ್ರಾತಃಕಾಲದಲ್ಲಿ ವೀರಶೈವ ಜಂಗಮ ವಟುಗಳಿಗೆ ಅಯ್ಯಾಚಾರ-ಶಿವದೀಕ್ಷೆ ಜರುಗಲಿದ್ದು, ಶಿವಾನಂದ ಹಿರೇಮಠ, ಸೋಮಲಿಂಗಶಾಸಿೊ ಗುಡ್ಡದಮಠ, ವಿನಾಯಕ ಹಿರೇಮಠ, ಶಿವಯೋಗಿ ಹಿರೇಮಠ, ಈರಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಲಿವೆ. ಜಾತ್ರೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಹ ನಡೆಯಲಿದೆ. ಮಾ.8 ರಿಂದ 23ರವರೆಗೆ ನಿರಂತರ ದಾಸೋಹದಲ್ಲಿ ಅನ್ನಸಂತರೆ​‍್ಣ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.