ವ್ಯಸನಮುಕ್ತ ಜೀವನವೇ ನಿಜವಾದ ಸಾಧನೆ
An addiction-free life is a true achievement
ಲೋಕದರ್ಶನ ವರದಿ
ಗದಗ 05: ಇಲಕಲ್ಲದ ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರು ದುಶ್ಚಟಗಳಿಂದ ಹಾಳಾಗುತ್ತಿರುವ ಕುಟುಂಬಗಳನ್ನು ರಕ್ಷಿಸಲು ‘ಮಹಾಂತ ಜೋಳಿಗೆ’ ಅಂದೋಲನದ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಜಾಗೃತಿ ಮೂಡಿಸಿದ ಮಹಾನ್ ತ್ಯಾಗಿಗಳಾಗಿದ್ದು, ಅವರ ‘ವ್ಯಸನಮುಕ್ತ ಹಾಗೂ ನೈತಿಕ ಸಮಾಜದ ನಿರ್ಮಾಣ’ ಸಂದೇಶವು ಸದಾಕಾಲ ಪ್ರಸ್ತುತವಾಗಿದೆ ಎಂದು ಸಾಂಸ್ಕೃತಿಕ ಘಟಕದ ಸಂಯೋಜಕ ರಮೇಶ ಹುಲಕುಂದ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ವ್ಯಸನಮುಕ್ತ ದಿನಾಚರಣೆ ಮತ್ತು ವ್ಯಸನಮುಕ್ತ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸುತ್ತ ಪ್ರತಿಯೊಬ್ಬರೂ ಬದುಕಿನಲ್ಲಿ ಸ್ವಾಮೀಜಿಯವರ ಜೀವನ ಮೌಲ್ಯಗಳು ಮತ್ತು ಸಂದೇಶವನ್ನು ಅಳವಡಿಸಿಕೊಂಡು ನೆಮ್ಮದಿಯ ಜೀವನ ನಡೆಸುತ್ತ ಸದೃಢ ಸಮಾಜ ಕಟ್ಟಲು ಮುಂದಾಗಬೇಕೆಂದು ಕರೆನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಅವರು ವಿದ್ಯಾರ್ಥಿಗಳು ಮಾದಕದ್ರವ್ಯ, ಧೂಮಪಾನ, ಮದ್ಯಪಾನ, ಮೊಬೈಲ್‌ನಂತಹ ವ್ಯಸನಗಳಿಂದ ದೂರವಿರಬೇಕು. ದುಶ್ಚಟಗಳು ಆರೋಗ್ಯ, ಶಿಕ್ಷಣ, ಭವಿಷ್ಯವನ್ನು ಹಾಳುಮಾಡುತ್ತವೆ. ಯುವಜನರು ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕು ಮತ್ತು ಜಾಗೃತಿ ಮೂಡಿಸಬೇಕೆಂದರು. ಎನ್.ಎಸ್.ಎಸ್. ಘಟಕದ ಸಂಯೋಜಕ ವಿಜಯಕುಮಾರ ಎಸ್. ವಂದನಾರೆ್ಣಗೈದರು. ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ವ್ಯಸನಮುಕ್ತ ಪ್ರಮಾಣವಚನ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 