ಮಂಗಳೂರು, ಎಪ್ರಿಲ್ 22,ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಸಂಪರ್ಕತಡೆ(ಕ್ವಾರಂಟೈನ್)ಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಈ ಉದ್ಯೋಗಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಕರೋನವೈರಸ್‌ನಿಂದ ಇತ್ತೀಚೆಗೆ ಸಾವನ್ನಪ್ಪಿದ ಬಂಟ್ವಾಳ ಮೂಲದ ಮಹಿಳೆಯ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು 14 ದಿನಗಳ ಸಂಪರ್ಕತಡೆಗೆ ಕಳುಹಿಸಲಾಗಿದೆ.ವರದಿಗಳಂತೆ, ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಜಿಲ್ಲಾಧಿಕಾರಿ ಉದ್ಯೋಗಿ ಭೇಟಿಯಾಗಿದ್ದಾರೆ. ಅಲ್ಲದೆ, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏಪ್ರಿಲ್ 18 ರಂದು ವಿಚಾರಿಸಿದ್ದರು. ಆದರೆ, ಆಸ್ಪತ್ರೆಯಲ್ಲಿದ್ದಾಗ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯನ್ನು ಉದ್ಯೋಗಿ ಭೇಟಿ ಮಾಡಿರಲಿಲ್ಲ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಉದ್ಯೋಗಿಯನ್ನು ಸಂಪರ್ಕತಡೆಗೆ ಕಳುಹಿಸಲು ಜಿಲ್ಲಾಧಿಕಾರಿ ಕಚೇರಿ ನಿರ್ಧರಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಯಾರಿ ತಿಳಿಸಿದ್ದಾರೆ.