ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಬೆಳೆಸುವ ಸಂಕಲ್ಪ ಕಾರ್ಯಕ್ರಮ
An initiative to foster health awareness among students
ಲೋಕದರ್ಶನ ವರದಿ
ಯರಗಟ್ಟಿ 25: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಿಸಲಾದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದರ ಯಶಸ್ವಿ ಅನುಷ್ಠಾನಕ್ಕಾಗಿ ವ್ಯಾಪಕ ಜಾಗೃತಿ ಮತ್ತು ಅನುಸರಣೆ ಕಾರ್ಯ ನಡೆಯುತ್ತಿದೆ ಎಂದು ಯೋಜನೆಯ ಯರಗಟ್ಟಿ ತಾಲೂಕು ಕೃಷಿ ಅಧಿಕಾರಿ ಬಸವರಾಜ ಶಿಗ್ಗಾಂವಿ ಹೇಳಿದರು.
ಸಮೀಪದ ತಳ್ಳೂರು ಗ್ರಾಮದ ಬಸವೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕುಟುಂಬದ ಅಮೂಲ್ಯ ಸಂಪತ್ತಾಗಿದ್ದು, ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಇಂದಿನ ದಿನಗಳಲ್ಲಿ ಮದ್ಯವ್ಯಸನ, ಗುಟ್ಕಾ, ಧೂಮಪಾನ ಸೇರಿದಂತೆ ವಿವಿಧ ದುಶ್ಚಟಗಳಿಂದ ಯುವಜನತೆ ಹಾನಿಗೊಳಗಾಗುತ್ತಿದೆ. ಕೆಟ್ಟ ಸಹವಾಸ ಹಾಗೂ ಕ್ಷಣಿಕ ಆಕರ್ಷಣೆಯಿಂದ ಆರಂಭವಾಗುವ ದುಶ್ಚಟಗಳು ವ್ಯಕ್ತಿಯ ಬದುಕಿನ ಜೊತೆಗೆ ಸಮಾಜದ ಆರೋಗ್ಯಕ್ಕೂ ಧಕ್ಕೆ ಉಂಟುಮಾಡುತ್ತವೆ ಎಂದು ಎಚ್ಚರಿಸಿದರು.
ವಿದ್ಯಾರ್ಥಿ ಜೀವನದಲ್ಲಿಯೇ ಆರೋಗ್ಯಕರ ಜೀವನಶೈಲಿ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎಂ.ಎಚ್. ದುಂಡನಕೊಪ್ಪ, ಎ.ಜೆ. ಕಾಂಬಳೆ, ಎಸ್.ಎಫ್. ಬಡಿಗೇರ, ಜೆ.ಎ. ಕೊಟ್ರಶೆಟ್ಟಿ, ಎಲ್.ವಿ. ಪಾಟೀಲ, ಬಿ.ಸಿ. ಸುಣದೊಳಿ, ಎ.ಎಚ್. ಕುದರಿ ಹಾಗೂ ಸೇವಾನಿರತರು ಮತ್ತು ಪ್ರಗತಿ ಬಂಧು ತಂಡದ ಸದಸ್ಯರು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 