ಸೋಂಕಿತರಿಗೆ ಧೈರ್ಯ ತುಂಬಿದ ಸಚಿವ ಆನಂದಸಿಂಗ್
ಬಳ್ಳಾರಿ,ಜು.08: ನಗರದ ಸರಕಾರಿ ದಂತ ಮಹಾವಿದ್ಯಾಲಯದಲ್ಲಿರಿಸಲಾಗಿರುವ ಕೊರೊನಾ ಸೊಂಕಿತರ ವಾಡರ್್ನೊಳಗೆ ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಬುಧವಾರ ತೆರಳಿ ಸೊಂಕಿತರ ಅಹವಾಲುಗಳನ್ನು ಆಲಿಸಿದರು ಮತ್ತು ಅವರ ಆರೋಗ್ಯ-ಕ್ಷೇಮ ವಿಚಾರಿಸಿದರು.
ವಿಮ್ಸ್ ನಿದರ್ೇಶಕ ಡಾ.ದೇವಾನಂದ, ವೈದ್ಯರು ಹಾಗೂ ಕೆಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪಿಪಿಇ ಕಿಟ್ ಧರಿಸಿಕೊಂಡು ಸೋಂಕಿತರಿರುವ ವಾಡರ್್ಗೆ ಪ್ರವೇಶಿಸಿದ ಸಚಿವ ಆನಂದಸಿಂಗ್ ಅವರು ಸೊಂಕಿತರ ಅಹವಾಲುಗಳನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು. ಸೋಂಕಿತರ ದುಃಖ-ದುಮ್ಮಾನಗಳಿಗೆ ದನಿಯಾಗುವುದರ ಜತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಿದರು; ಚಿಂತೆ ಬೇಡ ತಾವು ಗುಣಮುಖರಾಗಿ ಹೊರಬರುತ್ತೀರಿ ಎಂದು ಧೈರ್ಯ ತುಂಬಿದರು. ಸಚಿವರು ಅನೇಕ ಸೊಂಕಿತರ ಅಹವಾಲನ್ನು ಅತ್ಯಂತ ಸಮಚಿತ್ತದಿಂದ ವಿಚಾರಿಸಿದ್ದು ಕಂಡುಬಂದಿತು. ಸೋಂಕಿತರು ಇಲ್ಲಿ ಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆಯೂ ಚೆನ್ನಾಗಿದೆ ಎಂದರು.
ಕೊರೊನಾ ಬಂದಿದೆ ಎಂಬ ಭಯಬೇಡ;ತಮ್ಮೆಲ್ಲರೊಂದಿಗೆ ಜಿಲ್ಲಾಡಳಿತ ಮತ್ತು ಸರಕಾರವಿದೆ; ತಾವು ಆಸ್ಪತ್ರೆಯೊಳಗೆ ವಿಶ್ರಾಂತಿ ತೆಗೆದುಕೊಂಡು ಗುಣಮುಖರಾಗಿ ಹೊರಬನ್ನಿ ಎಂದು ಹಾರೈಸಿದರು.
ನಂತರ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚಚರ್ಿಸಿದರು. ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಜಿಲ್ಲಾಡಳಿತದಿಂದ ಹಾಗೂ ಸರಕಾರದಿಂದಾಗಬೇಕಾಗುವ ಸಹಾಯ-ಸಹಕಾರಗಳ ಮಾಹಿತಿಯನ್ನು ವಿವರವಾಗಿ ಪಡೆದರು ಮತ್ತು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದರು.
ಸಭೆ ನಡೆಸಿ ಸೂಚನೆ ಕೊಡುವುದರ ಬದಲಿಗೆ ಸ್ವತಃ ಸೊಂಕಿತರಿರುವ ಸ್ಥಳಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿದಾಗಲೇ ವಾಸ್ತವ ಅರಿವಾಗಿ ಕ್ರಮಕೈಗೊಳ್ಳಲು ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಸೊಂಕಿತರ ವಾಡರ್್ಗೆ ಭೇಟಿ ನೀಡಿರುವೆ ಎಂದರು.
ಈ ಹಿಂದೆಯೂ ಬಳ್ಳಾರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕೊರೊನಾ ಸೊಂಕಿತರ ವಾಡರ್್ಗೆ ಭೇಟಿ ನೀಡಿ ಅವರಿಗೆ ಧೈರ್ಯ ತುಂಬಿದ್ದನ್ನು ಸ್ಮರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಸೇರಿದಂತೆ ವಿಮ್ಸ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 